ಮಂಡ್ಯ: ಭಾರತ ದೇಶದಲ್ಲಿ ಬಹಳಷ್ಟು ಸಾಧಕರಿದ್ದಾರೆ. ವಿದ್ಯಾರ್ಥಿಗಳು ಸಾಧಕರ ಮಾರ್ಗ ಅನುಸರಿಸಿ ದೇಶಕ್ಕೆ ಕೊಡುಗೆ ನೀಡಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.
ಇಂದು ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸರ್ಕಾರದ ವತಿಯಿಂದ ಎಲ್ಲ ಸಾಧಕರನ್ನು ಗೌರವಿಸಲು ಸಾಧ್ಯವಾಗುವುದಿಲ್ಲ. ಸಂಘ ಸಂಸ್ಥೆಗಳು ಸಾಧಕರನ್ನು ಗುರುತಿಸಿ, ಗೌರವಿಸುತ್ತಿರುವ ಕೆಲಸ ಶ್ಲಾಘನೀಯ ಎಂದರು.
ಎಸ್.ಎಸ್.ಎಲ್.ಸಿ ಪರೀಕ್ಷೆಯ ಪದ್ಧತಿ ಬದಲಾವಣೆಯಿಂದ ಕಳೆದ ಬಾರಿ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಬಂದಿರಲಿಲ್ಲ. ಈ ಬಾರಿ ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆ ಉತ್ತಮ ಯೋಜನೆಗಳನ್ನು ರೂಪಿಸಿ ಫಲಿತಾಂಶವನ್ನು ಉತ್ತಮಗೊಳಿಸಿದೆ ಎಂದರು.
ಸರ್ಕಾರಿ ಶಾಲೆ ಎಂದರೆ ತಾತ್ಸಾರ ಬೇಡ ಇಂದು ಕಾರ್ಯಕ್ರಮದಲ್ಲಿ ಸನ್ಮಾನಿಸಿದ ಐ.ಎ.ಎಸ್. ಹಾಗೂ ಐ.ಪಿ.ಎಸ್ ಉತ್ತೀರ್ಣರಾಗಿರುವವರು ಸರ್ಕಾರಿ ಶಾಲೆಯಲೇ ವಿದ್ಯಾಭ್ಯಾಸ ಮಾಡಿರುವವರು. ಬಹಳಷ್ಟು ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳು ಹಾಗೂ ವಿಜ್ಞಾನಿಗಳಲ್ಲಿ ಶೇ.70ರಷ್ಟು ಜನ ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಿರುವವರು. ಸಾಧನೆ ಮಾಡಬೇಕು ಎಂಬ ಮನೋಭಾವನೆ ಇರುವವರು ಎಷ್ಟೇ ಕಷ್ಟ ಇದ್ದರೂ ಗೆಲ್ಲುತ್ತಾರೆ ಎಂದರು.
ನಾಲ್ವಡಿ ಅವರು ಆಕಾಶ ಇದ್ದಂತೆ ಅವರು ನೀಡಿರುವ ಕೊಡುಗೆಗಳು ಅನನ್ಯ. ಅವರು ಆಡಳಿತ ನಡೆಸುವ ಸಂದರ್ಭದಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಪರಿಸ್ಥಿತಿಗಳನ್ನು ಅವಲೋಕಿಸಿ ಅವುಗಳಲ್ಲಿ ಬದಲಾವಣೆ ತಂದು ಅಭಿವೃದ್ಧಿ ಪಡಿಸಿ ಸದಾ ಕಾಲ ಜನರ ಮನಸ್ಸಿನಲ್ಲಿ ಉಳಿದುಕೊಂಡಿದ್ದಾರೆ ಎಂದರು.
ಮಂಡ್ಯ ಜಿಲ್ಲೆಯಲ್ಲಿ ಕೆ.ಆರ್.ಎಸ್. ಶಿವನಸಮುದ್ರ, ಮೈ ಶುಗರ್ ಸೇರಿದಂತೆ ಹಲವಾರು ಯೋಜನೆಗಳನ್ನು ನಾಲ್ವಡಿ ಅವರು ಜಾರಿಗೆ ತಂದು ಸಾರ್ವಜನಿಕ ಜೀವನವನ್ನು ಸುಧಾರಣೆ ಮಾಡಿದರು. ನಾಲ್ವಡಿ ಅವರು ನೀಡಿದ ಕೊಡುಗೆಗಳಿಂದ ಮೈಸೂರು ಭಾಗದ ಜಿಲ್ಲೆಗಳು ಬೇರೆ ಜಿಲ್ಲೆಗಳಿಗಿಂತ ಮೊದಲೇ ಅಭಿವೃದ್ಧಿ ಹೊಂದಿತ್ತು. ಆದರೆ ಇಂದು ನಾವು ಅಭಿವೃದ್ಧಿಯಿಂದ ಹಿಂದೆ ಉಳಿಯುತ್ತಿದ್ದೇವೆ. ನಾವು ನಮ್ಮ ಆಲೋಚನೆಗಳನ್ನು ಬದಲಾವಣೆ ಮಾಡಿಕೊಂಡು ಅಭಿವೃದ್ಧಿ ಪಥದಲ್ಲಿ ಸಾಗಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಕೊಮ್ಮೇರಹಳ್ಳಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪುರುಷೋತ್ತಮಾನಂದನಾಥ ಸ್ವಾಮೀಜಿ, ಮಾಜಿ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…
ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…