ಮಂಡ್ಯ

ಸಕ್ಕರೆ ನಾಡಿನ ಮಂಡ್ಯ ಜಿಲ್ಲಾ ಪಂಚಾಯಿತಿಗೆ ರಾಷ್ಟ್ರೀಯ ಪುರಸ್ಕಾರ

ಮಂಡ್ಯ: ಜಲ ಶಕ್ತಿ ಅಭಿಯಾನದ ಅಂಗವಾಗಿ “ಜಲ ಸಂಚಾಯಿ ಜನ ಭಾಗಿದಾರಿ (ಜೆಎಸ್ ಜೆ ಬಿ)” ಅಭಿಯಾನದಡಿ ಮಂಡ್ಯ ಜಿಲ್ಲೆಯು ಜಲ ಸಂರಕ್ಷಣೆ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ನ. 18 ರಂದು ನಡೆದ ‘ರಾಷ್ಟ್ರೀಯ ಜಲ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಸಿ.ಆರ್.ಪಾಟೀಲ ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿರವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಜಲಮೂಲಗಳ ಸಂರಕ್ಷಣೆ, ಅಂತರ್ಜಲ ವೃದ್ಧಿ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯ ಪ್ರಮಾಣದ ನೀರು ಒದಗಿಸುವ ಹಾಗೂ ನೀರಿನ ಸಮಸ್ಯೆ ನಿವಾರಿಸಲು ಕೈಗೊಂಡ ಜಲಶಕ್ತಿ ಅಭಿಯಾನದ ಚಟುವಟಿಕೆಗಳನ್ನು ಯಶಸ್ವಿಯಾಗಿ ಹಾಗೂ ಪರಿಣಾಮಕಾರಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ಪ್ರಶಸ್ತಿಯ ಜೊತೆಗೆ 25 ಲಕ್ಷ ರೂ ನಗದು ಬಹುಮಾನ ನೀಡಲಾಗಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ಇತರೆ ಯೋಜನೆಗಳಡಿ ಜಿಲ್ಲೆಯು 2024ರ ಏಪ್ರಿಲ್ 1 ರಿಂದ 2025 ರ ಮಾರ್ಚ್ 31 ರವರೆಗೆ 7,192 ಜಲಸಂರಕ್ಷಣೆ ಕಾಮಗಾರಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಜಲಸಂಚಯ ಫೋರ್ಟಲ್‌ನಲ್ಲಿ ದಾಖಲಿಸಲಾಗಿತ್ತು. ಇವುಗಳಲ್ಲಿ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳಾದ ಬದು ನಿರ್ಮಾಣ, ಬೋರ್ ವೆಲ್ ರೀಚಾರ್ಜಾ ಪಿಟ್, ಸೋಕ್ ಪಿಟ್, ಸಮಗ್ರ ಕೆರೆ ಅಭಿವೃದ್ಧಿ, ಕಟ್ಟೆಗಳ ಅಭಿವೃಧ್ಧಿ, ಕಲ್ಯಾಣಿಗಳ ಜೀರ್ಣೋದ್ಧಾರ, ಮಳೆ ನೀರು ಕೊಯ್ಲು, ತೆರೆದ ಬಾವಿ, ನಾಲಾ ಹೊಳೆತ್ತುವುದು, ಚೆಕ್ ಡ್ಯಾಂ ಕಾಮಗಾರಿಗಳನ್ನು ಅನುಷ್ಟಾನ ಮಾಡಲಾಗಿದೆ.

ಇದನ್ನು ಓದಿ: ಕೊಡಗು| ಫುಟ್ಬಾಲ್ ಮ್ಯಾಚ್ ವೇಳೆ ಚೇರ್‌ನಲ್ಲಿ ಹೊಡೆದಾಡಿಕೊಂಡ ಅಭಿಮಾನಿಗಳು

ಅಭಿಯಾನದ ಉದ್ದೇಶ “ನೀರಿಗಾಗಿ ಒಂದಾಗಿ, ಪ್ರತಿ ಹನಿ ನೀರನ್ನು ಸಂರಕ್ಷಿಸಿ“ ಎಂಬ ಧ್ಯೇಯದೊಂದಿಗೆ ಜಲಸಂಚಯ ಜನಭಾಗಿದಾರಿ 1.0 ಅಭಿಯಾನವು ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು, ಮಳೆ ನೀರನ್ನು ಸಂಹಗ್ರಹಿಸುವುದು, ಜಲ ಸಂರಕ್ಷಣೆಯ ಸಂಸ್ಕೃತಿಯನ್ನು ಬೆಳೆಸುವುದು ಮತ್ತು ನೀರಿನ ಕೊರತೆ ನಿವಾರಿಸುವುದು, ಹರಿಯುವ ನೀರನ್ನು ತಡೆಯುವುದು, ತಡೆದ ನೀರನ್ನು ಇಂಗಿಸುವುದು, ಜಲ ಸಂಪನ್ಮೂಲಗಳ ಸಂರಕ್ಷಣೆ, ಮರುಸ್ಥಾಪನೆ, ಮರುಬಳಕೆಗೆ ಉತ್ತೇಜಿಸುವುದು, ಅಮೃತ ಸರೋವರಗಳ ರಚನೆ ಮತ್ತು ನವೀಕರಣದ ಮೂಲಕ ನೀರಿನ ಸಂಗ್ರಹಣೆ ಹೆಚ್ಚಿಸುವುದು.

ಮೈಸೂರು ವಿಭಾಗದ 8 ಜಿಲ್ಲೆಗಳ ಪೈಕಿ ಪ್ರಥಮ ಸ್ಥಾನ. ಜಲ ಸಂಚಾಯಿ ಜನ ಭಾಗಿದಾರಿ ಅಭಿಯಾನದಡಿ ರಾಜ್ಯಗಳನ್ನು 5 ವಲಯಗಳಾಗಿ ವಿಂಗಡಿಸಲಾಗಿತ್ತು. 3ನೇ ವಲಯದಲ್ಲಿ ಆಂದ್ರಪ್ರದೇಶ, ತೆಲಾಂಗಣ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿವೆ. ಈ ಪೈಕಿ ಕರ್ನಾಟಕ ರಾಜ್ಯದ 7 ಜಿಲ್ಲೆಗಳಿಗೆ ರಾಷ್ಟ್ರೀಯ ಪ್ರಶಸ್ತಿ ಘೋಷಿಸಲಾಗಿತ್ತು. ಮೈಸೂರು ವಿಭಾಗದ ಜಿಲ್ಲೆಗಳ ಪೈಕಿ ಮಂಡ್ಯ ಜಿಲ್ಲೆಯು ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ.

ಜಲಶಕ್ತಿ ಅಭಿಯಾನದ ಅನುಷ್ಠಾನದಲ್ಲಿ ಜಿಲ್ಲೆಗೆ ಪ್ರಶಸ್ತಿ ದೊರಕಿರುವುದು ಸಂತಸದ ವಿಷಯ. ಈ ಯಶಸ್ಸಿಗೆ ಕಾರಣರಾದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸುವಲ್ಲಿ ಈ ಪ್ರಶಸ್ತಿ ಮಹತ್ತರ ಪಾತ್ರ ವಹಿಸಲಿದೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕೇಂದ್ರ ಜಲ ಶಕ್ತಿ ಇಲಾಖೆಯ ರಾಜ್ಯ ಸಚಿವರಾದ ವಿ.ಸೋಮಣ್ಣ ಹಾಗೂ ರಾಜ್ ಭೂಷಣ್ ಚೌಧರಿರವರು ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

6 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

8 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

8 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

8 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

8 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

8 hours ago