ಮಂಡ್ಯ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯಾದ್ಯಾಂತ ಮಾ.8ರಂದು ರಾಷ್ಟ್ರೀಯ ಲೋಕ-ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಆನಂದ್.ಎಂ ಅವರು ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಬರುವಂತಹ 7 ತಾಲೂಕುಗಳಲ್ಲಿಯೂ ಸಹ ಲೋಕ್-ಅದಾಲತ್ ಮುಖಾಂತರ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಸಲುವಾಗಿ ಪೂರ್ವಭಾವಿ ಭೈಠೆಕ್‌ಗಳನ್ನು ನಡೆಸಲಾಗುತ್ತಿದೆ ಎಂದರು.
ರಾಷ್ರೀಯ ಲೋಕ ಅದಾಲತ್‌ನಲ್ಲಿ ಆಸ್ತಿ ವಿವಾದಗಳನನ್ನು ಒಳಗೊಂಡಂತೆ ಸಿವಿಲ್ ವ್ಯಾಜ್ಯಗಳು, ಹಣ ವಸೂಲಾತಿ ದಾವೆಗಳು, ಮೋಟಾರ್ ವಾಹನ ಪ್ರಕರಣಗಳು, ಜೀವನಾಂಶ ಪ್ರಕರಣ, ದಾಂಪತ್ಯ ಪುನರ್ ಸ್ಥಾಪನೆ ಪ್ರಕರಣಗಳು ಎಲ್ಲವನ್ನು ಆಯಾ ನ್ಯಾಯಾಲಯಗಳಲ್ಲಿ ಇತ್ಯರ್ಥಗೊಳಿಸುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಲೋಕ-ಅದಾಲತ್ ನ್ಯಾಯಾಲಯಗಳಲ್ಲಿ ಬಾಕಿ ಇರುವಂತಹ ಪ್ರಕರಣಗಳು ನ್ಯಾಯಾಲಯಕ್ಕೆ ದಾಖಲಾಗುವ ಮುನ್ನ ಉಭಯ ಪಕ್ಷಗಾರರಿಗೆ ನೋಟಿಸ್ ನೀಡಿ ಕರೆಸಿ ಪ್ರಾಧಿಕಾರದ ವತಿಯಿಂದ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ ಕೊಳ್ಳಬಹುದು ಎಂದರು.
ಜನಸಾಮನ್ಯರು ಇದರ ಸದುಪಯೋಗ ಪಡೆದು ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವ ಮೂಲಕ ಲೋಕ-ಅದಾಲತ್‌ನ್ನು ಯಶಸ್ವಿಗೊಳಿಸಿಕೊಳ್ಳಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…