Mysore
17
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಅಂಬೇಡ್ಕರ್‌ ಆಶಯದಂತೆ ಎನ್‌ಡಿಎ ಸರ್ಕಾರ ಕೆಲಸ ಮಾಡುತ್ತಿದೆ: ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ ಸಂವಿಧಾನದ ಆಶಯದಂತೆ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವೇಗೌಡರು ದಲಿತರ ಉದ್ಧಾರಕ್ಕಾಗಿ ಅನೇಕ ಉತ್ತಮ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು. ಗಂಗಾ ಕಲ್ಯಾಣ ಯೋಜನೆಯನ್ನು ಅವರು ಜಾರಿಗೆ ತಂದು ಅನೇಕರಿಗೆ ಸಹಾಯ ಮಾಡಿದ್ದರು. ಸಚಿವರಾಗಿ, ಸಿಎಂ ಆಗಿ, ಪ್ರಧಾನಿಯಾಗಿ ದಲಿತರ ಉದ್ಧಾರಕ್ಕೆ ಬಹುದೊಡ್ಡ ಕಾಣಿಕೆ ನೀಡಿದ್ದಾರೆ ಎಂದು ಹೇಳಿದರು.

ಮೊದಲು ಮೀಸಲು ಸೌಲಭ್ಯ ಕೇವಲ ವಿಧಾನಸಭೆ, ಲೋಕಸಭೆ ಕ್ಷೇತ್ರಗಳಿಗೆ ಮೀಸಲಾಗಿತ್ತು. ದೇವೇಗೌಡರು ಆ ಮೀಸಲು ಸೌಲಭ್ಯವನ್ನು ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿಯೂ ಜಾರಿಗೆ ತಂದರು. ಬಳಿಕ ಹಾಸನ ಜಿಲ್ಲಾ ಪಂಚಾಯಿತಿ ಅಧ್ಯಕ್ಷರನ್ನಾಗಿ ಎಂಎ ಪದವೀಧರನಾಗಿದ್ದ ಒಬ್ಬ ದಲಿತ ಯುವಕನನ್ನು ಮಾಡಿದ್ದರು. ತಳಮಟ್ಟದ ಸಮುದಾಯಗಳ ವಿದ್ಯಾವಂತರನ್ನು ಗುರುತಿಸಿ ಅಧಿಕಾರ ನೀಡುವ ಕೆಲಸವನ್ನು ದೇವೇಗೌಡ ಅವರೇ ಮಾಡಿದ್ದರು ಎಂದು ಮಾಹಿತಿ ನೀಡಿದರು.

 

Tags:
error: Content is protected !!