ಮಂಡ್ಯ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವೇಗೌಡರು ದಲಿತರ ಉದ್ಧಾರಕ್ಕಾಗಿ ಅನೇಕ ಉತ್ತಮ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು. ಗಂಗಾ ಕಲ್ಯಾಣ ಯೋಜನೆಯನ್ನು ಅವರು ಜಾರಿಗೆ ತಂದು ಅನೇಕರಿಗೆ ಸಹಾಯ ಮಾಡಿದ್ದರು. ಸಚಿವರಾಗಿ, ಸಿಎಂ ಆಗಿ, ಪ್ರಧಾನಿಯಾಗಿ ದಲಿತರ ಉದ್ಧಾರಕ್ಕೆ ಬಹುದೊಡ್ಡ ಕಾಣಿಕೆ ನೀಡಿದ್ದಾರೆ ಎಂದು ಹೇಳಿದರು.
ಮೊದಲು ಮೀಸಲು ಸೌಲಭ್ಯ ಕೇವಲ ವಿಧಾನಸಭೆ, ಲೋಕಸಭೆ ಕ್ಷೇತ್ರಗಳಿಗೆ ಮೀಸಲಾಗಿತ್ತು. ದೇವೇಗೌಡರು ಆ ಮೀಸಲು ಸೌಲಭ್ಯವನ್ನು ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿಯೂ ಜಾರಿಗೆ ತಂದರು. ಬಳಿಕ ಹಾಸನ ಜಿಲ್ಲಾ ಪಂಚಾಯಿತಿ ಅಧ್ಯಕ್ಷರನ್ನಾಗಿ ಎಂಎ ಪದವೀಧರನಾಗಿದ್ದ ಒಬ್ಬ ದಲಿತ ಯುವಕನನ್ನು ಮಾಡಿದ್ದರು. ತಳಮಟ್ಟದ ಸಮುದಾಯಗಳ ವಿದ್ಯಾವಂತರನ್ನು ಗುರುತಿಸಿ ಅಧಿಕಾರ ನೀಡುವ ಕೆಲಸವನ್ನು ದೇವೇಗೌಡ ಅವರೇ ಮಾಡಿದ್ದರು ಎಂದು ಮಾಹಿತಿ ನೀಡಿದರು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ…
ಮಂಡ್ಯ: ಯುಗಾದಿ ಹಬ್ಬದ ದಿನ ಪಚ್ಚಿ ಆಟವಾಡುತ್ತಿದ್ದ ನೂರಾರು ಮಂದಿ ಮೇಲೆ ದಾಳಿ ನಡೆಸಿದ್ದೂ ಅಲ್ಲದೆ ಯುವಕನ ಮೇಲೆ ಮಾರಣಾಂತಿಕ…
ನಂಜನಗೂಡು: ದಿನಾಂಕ 7-3-26 ರಂದು ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ ದಂಡೆಯ ಮೇಲೆ 46 ಬೃಹತ್ ಮರಗಳನ್ನು…
ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಐದು ದಿನಗಳ ಕಾಲ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಅಮೇರಿಕಾ ಅಧ್ಯಕ್ಷ ಟ್ರಂಪ್…
ಬೆಂಗಳೂರು: ಇಸ್ರೇಲ್-ಇರಾನ್ ನಡುವಿನ ಯುದ್ಧ ಪರಿಸ್ಥಿತಿಯಿಂದಾಗಿ ಚಿನ್ನ ಮತ್ತು ಬೆಳ್ಳಿ ದರಗಳ ಸತತ ಕುಸಿತ ಮುಂದುವರೆದಿದೆ. ಇಂದೂ ಕೂಡ ಚಿನ್ನ,…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ರಾಷ್ಟ್ರಗಳ ಸ್ಥಿತಿ ಚಿಂತಾಜನಕವಾಗಿದೆ. ಯುದ್ಧದಿಂದ ಭಾರತದ ಮೇಲೆ ಪರಿಣಾಮ ಬೀರಿದೆ ಎಂದು ಪ್ರಧಾನಿ…