ಮಂಡ್ಯ

ಮೈಸೂರಿನ ಕೇಂದ್ರೀಯ ಪೆಟ್ರೋ ಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಹೊಸ ಕೋರ್ಸ್‌ ಆರಂಭ

ಮಂಡ್ಯ : ಪಾಲಿಮರ್, ಪ್ಲಾಸ್ಟಿಕ್ ಕೈಗಾರಿಕೆ ಕುರಿತ ಕೋರ್ಸ್‌ಗಳನ್ನು ಹೊಂದಿರುವ ಮೈಸೂರಿನ ಕೇಂದ್ರೀಯ ಪೆಟ್ರೋ ಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಟೆಕ್ನಾಲಜಿ ಮತ್ತು ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಮೌಲ್ಡ್ ಟೆಕ್ನಾಲಜಿ ಎಂಬ ಎರಡು ಹೊಸ ಕೋರ್ಸ್‌ಗಳನ್ನು ಆರಂಭಿಸಿದೆ ಎಂದು ಸಂಸ್ಥೆಯ ಸಹಾಯಕ ತಾಂತ್ರಿಕ ಅಧಿಕಾರಿ ಲಕ್ಷ್ಮಣ್ ಹೇಳಿದರು.

ಹತ್ತನೇ ತರಗತಿ ಉತ್ತೀರ್ಣರಾದವರು ಮೂರು ವರ್ಷದ ಕೋರ್ಸ್‌ಗೆ ಸೇರಬಹುದು. ಪಿಯುಸಿ (ವಿಜ್ಞಾನ) ಅಥವಾ ಐಟಿಐ ಓದಿರುವವರು ಎರಡು ವರ್ಷದ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

೨೦೨೫-೨೬ನೇ ಸಾಲಿನ ಡಿಪ್ಲೊಮೊ ಕೋರ್ಸ್‌ಗಳಿಗೆ ಪ್ರವೇಶ ಆರಂಭಗೊಂಡಿದ್ದು, ಮೈಸೂರಿನ ಸಿಪೆಟ್‌ನ ಕೋರ್ಸ್‌ಗಳಿಗೆ ಆಯ್ಕೆ ಮಾಡುವ ಸಮಯದಲ್ಲಿ ಕರ್ನಾಟಕದವರಿಗೆ ಮೊದಲ ಆದ್ಯತೆ

ನೀಡಲಾಗುವುದು. ಇಲ್ಲಿ ವ್ಯಾಸಂಗ ಮಾಡಿದ ಪ್ರತಿಯೊಬ್ಬ ವಿದ್ಯಾರ್ಥಿಗೂ ಉದ್ಯೋಗ ದೊರಕಿದೆ. ಅನೇಕರು ಸ್ವ-ಉದ್ಯೋಗ ಆರಂಭಿಸಿದ್ದಾರೆ. ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ವ್ಯವಸ್ಥೆ, ವಿದ್ಯಾರ್ಥಿವೇತನದ ಸೌಲಭ್ಯವೂ ಇದೆ. ಪ್ರತಿ ಸೆಮಿಸ್ಟರ್‌ಗೆ ೨೦ ಸಾವಿರ ರೂ.ವರೆಗೆ ಖರ್ಚಾಗಲಿದೆ ಎಂದು ತಿಳಿಸಿದರು.

ಪ್ಲಾಸ್ಟಿಕ್ ವೈವಿಧ್ಯಮಯ ಬಳಕೆ, ಪ್ಲಾಸ್ಟಿಕ್ ಮೌಲ್ಡಿಂಗ್, ಪ್ಲಾಸ್ಟಿಕ್ ಸಂಸ್ಕರಣೆ, ಪ್ಲಾಸ್ಟಿಕ್ ಗುಣಮಟ್ಟ ಪರಿಶೀಲನೆ, ಆಧುನಿಕ ವಿನ್ಯಾಸದಲ್ಲಿ ಪ್ಲಾಸ್ಟಿಕ್ ವಸ್ತುಗಳ ತಯಾರಿಕ, ಪ್ಲಾಸ್ಟಿಕ್ ಮರು ಬಳಕೆ ವಿಧಾನ, ಪ್ಲಾಸ್ಟಿಕ್ ಪೈಪ್‌ಗಳು ಮತ್ತು ಇನ್ನಿತರೆ ವಸ್ತುಗಳ ತಯಾರಿಕೆ, ಮಾರುಕಟ್ಟೆ, ದರ ಪರಿಷ್ಕರಣೆ ಕುರಿತಂತೆ ಕಲಿಸಿಕೊಡಲಾಗುವುದು ಎಂದರು.

ಆಟೋಮೊಬೈಲ್ ಕೈಗಾರಿಕೆಗಳು, ವಾಹನದ ಬಿಡಿ ಭಾಗಗಳನ್ನು ತಯಾರಿಸುವ ಉದ್ಯಮಗಳು, ಪಿವಿಸಿ ಪೈಪ್ ತಯಾರಿಕಾ ಕಂಪೆನಿಗಳು ಮತ್ತು ವಿದ್ಯುನ್ಮಾನ, ಪ್ಲಾಸ್ಟಿಕ್ ಉತ್ಪಾದನಾ ಕಂಪೆನಿಗಳು, ಆಹಾರೋದ್ಯಮ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಬಹುದು ಎಂದು ವಿವರಿಸಿದರು.

ಹಿರಿಯ ಸಹಾಯಕ ಮಹೇಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

2 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

3 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

3 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

4 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

4 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

4 hours ago