ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೊಸ ವರ್ಷ ಆಚರಣೆಗೆ ಸರ್ವ ರೀತಿಯಲ್ಲೂ ಸಜ್ಜಾಗಿದ್ದು, ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ.
ಪ್ರಮುಖವಾಗಿ ಕಾವೇರಿ ನದಿ ತೀರದಲ್ಲಿ ಅಗತ್ಯ ಕ್ರಮ ತೆಗೆದುಕೊಂಡಿದೆ. ಕಾವೇರಿ ನದಿಯಲ್ಲಿ ಪ್ರತಿ ವರ್ಷ ಹೊಸ ವರ್ಷಾಚರಣೆ ವೇಳೆ ಮೋಜು ಮಸ್ತಿ ಮಾಡುತ್ತಿದ್ದರು. ಈ ವೇಳೆ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆಯೂ ಹೆಚ್ಚಾಗುತ್ತಿತ್ತು. ಈ ಸಾವು ನೋವುಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಕಾವೇರಿ ತೀರದಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದ ಜನವರಿ.2ರ ಬೆಳಿಗ್ಗೆ 6 ರವರೆಗೆ ನಿಷೇಧಾಜ್ಞೆ ಜಾರಿ ಮಾಡಿದೆ.
ಜೊತೆಗೆ ಹೊಸ ವರ್ಷಾಚರಣೆ ನೆಪದಲ್ಲಿ ಡ್ರಗ್ಸ್ ಗಾಂಜಾಗಳಂತ ಮಾದಕ ವಸ್ತುಗಳ ಬಳಕೆಯೆ ವಿಚಾರದಲ್ಲಿ ಮಂಡ್ಯ ಖಾಕಿ ಅಲರ್ಟ್ ಆಗಿದ್ದು, ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ.





