ಮಂಡ್ಯ

ಮದ್ದೂರಿನಲ್ಲಿ ನಿಖಿಲ್‌ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ: ಬೃಹತ್‌ ಅನಾನಸ್‌ ಹಾರ ಹಾಕಿದ ಅಭಿಮಾನಿಗಳು

ಮದ್ದೂರು: ಇಲ್ಲಿನ ಭಾರತಿ ನಗರದಲ್ಲಿ ಏರ್ಪಡಿಸಿರುವ ಜೆಡಿಎಸ್ ಸದಸ್ಯತ್ವ ಡಿಜಿಟಲ್ ಅಭಿಯಾನಕ್ಕೆ ಚಾಲನೆ ನೀಡಲು ಆಗಮಿಸಿದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಬೃಹತ್‌ ಅನಾನಸ್‌ ಹಾರ ಹಾಕಿ ಸ್ವಾಗತ ಕೋರಲಾಯಿತು.

ಮಾಜಿ ಶಾಸಕ ಡಿಸಿ ತಮ್ಮಣ್ಣ, ಮಾಜಿ ಶಾಸಕ ಅನ್ನದಾನಿ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ ರಮೇಶ್, ಕಾರ್ಯಾಧ್ಯಕ್ಷ ರಾಜಣ್ಣ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು.

ಈ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ಇಂದಿನಿಂದ ಮಂಡ್ಯ ಜಿಲ್ಲೆ, ಮದ್ದೂರಿನ ಭಾರತಿನಗರದಲ್ಲಿ ಜೆಡಿಎಸ್ ಡಿಜಿಟಲ್ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಸಮಾವೇಶಕ್ಕೆ ಕಾರ್ಯಕರ್ತರು, ಜೆಡಿಎಸ್ ಪಕ್ಷದ ಹಿರಿಯ ಹಾಗೂ ಕಿರಿಯ ಮುಖಂಡರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ನಂತರ ಮಳವಳ್ಳಿ ರಸ್ತೆಯಲ್ಲಿರುವ ಪ್ರಸಿದ್ಧ ಹೋಟೆಲ್ ರವಿ ಪಿಂಟು ಅವರು ನಿಖಿಲ್‌ ಕುಮಾರಸ್ವಾಮಿಗೆ ಚಹಾ ನೀಡಿ ತಮ್ಮ ಅಭಿಮಾನ ವ್ಯಕ್ತಪಡಿಸಿದರು.

ತೋಪ್ಪನಹಳ್ಳಿ ಕೆಂಗಲ್ ಗೌಡ ಅವರು ನಿಖಿಲ್ ಕುಮಾರಸ್ವಾಮಿಗೆ ತಿರುಪತಿ ಲಾಡು ಪ್ರಸಾದ ನೀಡಿ ಮುಂದಿನ ನಿಮ್ಮ ಭವಿಷ್ಯ ಯಶಸ್ವಿಯಾಗಲೆಂದು ಹಾರೈಸಿದರು.

ಎಪಿಎಂಸಿ ಮಾರುಕಟ್ಟೆಯ ವರ್ತಕ ರವಿ ಚನ್ನಸಂದ್ರ ಉಮೇಶ್ ಸೇರಿದಂತೆ ಇತರರು ನಿಖಿಲ್ ಕುಮಾರಸ್ವಾಮಿ ಬೃಹತ್ ಗುಲಾಬಿ ಹಾರ ಹಾಕಿ ಅಭಿನಂದಿಸಿದರು.

ಆಂದೋಲನ ಡೆಸ್ಕ್

Recent Posts

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

1 min ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

5 mins ago

ಹಾರಂಗಿ ಸಾಕಾನೆ ಶಿಬಿರ ಪ್ರವಾಸಿಗರಿಗೆ ಮುಕ್ತ

ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…

10 mins ago

ಕ್ವಾರಿ, ಕ್ರಷರ್‌ಗಳ ಬಂದ್; ನಿರ್ಮಾಣ ವಲಯಕ್ಕೆ ತಟ್ಟಿದ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…

16 mins ago

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

9 hours ago