ಮಂಡ್ಯ

14 ಅಲ್ಲ, ಸಾವಿರಾರು ಸೈಟುಗಳನ್ನು ಲೂಟಿ ಹೊಡೆದಿದ್ದಾರೆ, ಇದರ ಹಿಂದೆ ದೊಡ್ಡ ತಿಮಿಂಗಿಲಗಳಿವೆ: ಆರ್ .ಅಶೋಕ

ತನಿಖೆ ಮಾಡಬೇಡಿ ಎನ್ನುವುದು ತುಘಲಕ್ ದರ್ಬಾರ್‌, ಸರ್ವಾಧಿಕಾರಿ ಧೋರಣೆ: ಪ್ರತಿಪಕ್ಷ ನಾಯಕ

ಮಂಡ್ಯ: ಮುಡಾ ಹಗರಣದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ. ಇದರ ಹಿಂದೆ ಇರುವ ದೊಡ್ಡ ತಿಮಿಂಗಿಲಗಳು ಹೊರಬರಲು ಸಿಬಿಐ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಮಂಡ್ಯದಲ್ಲಿ ಗುರುವಾರ(ಆ.22) ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಹಗರಣದಲ್ಲಿ ಸಿಲುಕಿದಾಗ ಮಾತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಾತಿ ನೆನಪಾಗುತ್ತದೆ. ಇವರು 14 ಸೈಟು ನುಂಗಿದ ಕೂಡಲೇ ಹಿಂಬಾಲಕರು ನೂರಾರು ಸೈಟುಗಳನ್ನು ನುಂಗಿದ್ದಾರೆ. ಇವರದ್ದೇ ಹಿಂಬಾಲಕರಾದ ಮರಿಗೌಡರೇ ಪತ್ರ ಬರೆದು ಅಕ್ರಮವಾಗಿದೆ ಎಂದು ಹೇಳಿದ್ದರು. ಅದನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ಆರ್‌ಟಿಐ ಮೂಲಕ ಹೊರತೆಗೆದಾಗ ಎಲ್ಲವೂ ಬಯಲಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಒಂದೂ ಸೈಟು ಅಕ್ರಮವಾಗಿ ಪಡೆದಿಲ್ಲ ಎಂದು ಹೇಳಿದ್ದಾರೆ ಎಂದರು.

ಈಗ ವೈಟ್‌ನರ್‌ ಅಕ್ರಮ ಬಯಲಾಗಿದೆ. ದಾಖಲೆಗಳಲ್ಲಿ ವೈಟ್‌ನರ್‌ ಹಾಕಿ ಕೆಲವು ಅಂಶಗಳನ್ನು ಮರೆಮಾಚಲಾಗಿದೆ. ಏನಾದರೂ ತಪ್ಪಾದಾಗ ಅದರ ಮೇಲೆ ಪೆನ್‌ನಲ್ಲಿ ಗೆರೆ ಎಳೆದರೆ ಸಾಕಿತ್ತು. ಆದರೆ ವಿಷಯವನ್ನು ಮುಚ್ಚಿಹಾಕಲು ವೈಟ್‌ನರ್‌ ಬಳಸಿದ್ದಾರೆ. ವಿಜಯನಗರದಲ್ಲೇ ನಿವೇಶನ ಬೇಕು ಎಂದು ಸಿಎಂ ಪತ್ನಿ ಬರೆದಿದ್ದಾರೆ. ಅದಕ್ಕೆ ವೈಟ್‌ನರ್‌ ಹಚ್ಚಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ದಾಖಲೆ ತಿದ್ದಿದ್ದಾರೆ ಎಂದು ದೂರಿದರು.

ಜೈಲಿಗೆ ಹಾಕಿ ಎಂದಿಲ್ಲ

ರಾಜ್ಯಪಾಲರು ದೂರನ್ನು ಆಧರಿಸಿ ತನಿಖೆಗೆ ಅವಕಾಶ ನೀಡಿದ್ದಾರೆಯೇ ಹೊರತು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಹಾಕಿಸಿಲ್ಲ. ತನಿಖೆ ಮಾಡಿ ಎಂದಿದ್ದಕ್ಕೆ ಕಾಂಗ್ರೆಸ್‌ ನಾಯಕರು ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ಪ್ರಮಾಣ ವಚನ ಬೋಧಿಸಿದ್ದೇ ರಾಜ್ಯಪಾಲರು. ಅಂತಹವರು ತನಿಖೆ ಮಾಡಿ ಎಂದಿದ್ದನ್ನು ವಿರೋಧಿಸಿದರೆ ಅದು ಸರ್ವಾಧಿಕಾರಿ ಧೋರಣೆಯಾಗುತ್ತದೆ. ಅದು ತುಘಲಕ್‌ ದರ್ಬಾರ್‌ ಆಗುತ್ತದೆ. ಸಾಂವಿಧಾನಿಕವಾಗಿ ದೊಡ್ಡ ಹುದ್ದೆಯಲ್ಲಿರುವವರಿಗೆ ಕೀಳು ಮಾತುಗಳಿಂದ ನಿಂದಿಸುವುದು ಅಕ್ಷಮ್ಯ ಅಪರಾಧ. ಇದು ದಲಿತರಿಗೆ ಮಾಡುವ ಅಪಮಾನ. ಇದಕ್ಕಾಗಿ ಕಾಂಗ್ರೆಸ್‌ ಕ್ಷಮೆ ಯಾಚಿಸಬೇಕು ಎಂದರು.

ಬಿಜೆಪಿ ಸರ್ಕಾರ 40% ಕಮಿಶನ್‌ ಪಡೆದಿದೆ ಎಂದು ಕಾಂಗ್ರೆಸ್‌ ಸುಳ್ಳು ಆರೋಪ ಮಾಡಿತ್ತು. ಅದಕ್ಕಾಗಿ ಪ್ರಕರಣ ದಾಖಲಿಸಿದ್ದು, ಅದರ ಜಾಮೀನಿನ ಮೇಲೆ ಕಾಂಗ್ರೆಸ್‌ ನಾಯಕರು ಹೊರಗೆ ಓಡಾಡುತ್ತಿದ್ದಾರೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

6 hours ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

7 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

8 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

13 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

13 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

14 hours ago