ಮೈಸೂರು : ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ತಾನು ಆಡಿರುವ ಮಾತುಗಳು ಉದ್ದೇಶಪೂರ್ವಕ ಅಲ್ಲ. ಆಡು ಭಾಷೆಯಲ್ಲಿ ಮಾತಾಡಿದ್ದೇನೆ. ನನ್ನ ಮಾತುಗಳಿಗೆ ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದು, ಇದನ್ನು ಬೆಳೆಸುವುದು ಬೇಡ ಎಂದು ಸೆಸ್ಕ್ ಅಧ್ಯಕ್ಷರೂ ಆದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಸ್ಪಷ್ಟನೆ ನೀಡಿದರು.
ಕಾಮಗಾರಿ ಚಾಲನೆ ವೇಳೆ ತರೀಪುರ ಗ್ರಾಮಸ್ಥರು ಸಮಸ್ಯೆ ಹೇಳಿಕೊಂಡಾಗ ಅಧಿಕಾರಿಗಳಿಗೆ ಎಚ್ಚರಿಕೆ ಕೊಡುವಾಗ ಆಡು ಭಾಷೆಯಲ್ಲಿ ಮಾತಾಡಿರುವೆ. ಅಧಿಕಾರಿಗೆ ಬೆದರಿಕೆಯನ್ನೂ ಹಾಕಿಲ್ಲ. ಇನ್ನೊಂದು ಧರ್ಮ ಮತ್ತು ಜಾತಿಯ ಬಗ್ಗೆ ಎಂದೂ ಮಾತಾಡಿಲ್ಲ. ತಮ್ಮ ಕ್ಷೇತ್ರದಲ್ಲಿ ಕಾಲದಿಂದಲೂ ಸೌಹಾರ್ದವಾಗಿ ಇದ್ದೇವೆ ಎಂದು ಹೇಳಿದರು.
ಮುಸ್ಲಿಂ ಮುಖಂಡರು, ಎಸ್‌ಡಿಪಿಐ ಕಾರ್ಯಕರ್ತರಲ್ಲಿ ಕಳಕಳಿಯಿಂದ ಮನವಿ ಮಾಡುತ್ತೇನೆ. ಇದನ್ನು ಮುಂದುವರಿಸುವುದು ಬೇಡ. ತಮ್ಮ ಕ್ಷೇತ್ರದಲ್ಲಿ ಮೊದಲಿಂದಲೂ ಮುಸ್ಲಿಂ ಜನಾಂಗದವರೊಂದಿಗೆ ಚೆನ್ನಾಗಿದ್ದೇವೆ. ಅವರ ಎಲ್ಲ ಅಭಿವೃದ್ಧಿ ಕೆಲಸಗಳಿಗೂ ಒತ್ತಾಸೆಯಾಗಿದ್ದೇನೆ. ರಾಜಕಾರಣದ ಹೊರತಾಗಿ ಇದನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.
ನಮ್ಮ 40 ವರ್ಷದ ರಾಜಕಾರಣದಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಒಂದೇ ಒಂದು ಕೋಮು ಗಲಭೆ ಅಥವಾ ಜಾತಿ ಸಂಘರ್ಷ ಆಗಿಲ್ಲ. ಜನರ ವಿಶ್ವಾಸ ಗಳಿಸಿಕೊಂಡು ಕೆಲಸ ಮಾಡುತ್ತ ಬಂದಿದ್ದೇವೆ. ಸಂವಿಧಾನ ಬದ್ಧವಾಗಿ ನಮ್ಮ ಕೆಲಸ ಮುಂದುವರಿಯಲಿದೆ. ಯಾರಿಗೂ ನೋವುಂಟು ಮಾಡುವುದು ನಮ್ಮ ಉದ್ದೇಶ ಇಲ್ಲ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…