ಮಂಡ್ಯ

ಸಿಎಂ ಸಿದ್ದರಾಮಯ್ಯ ವಿರುದ್ಧದ ಆರೋಪಕ್ಕೆ ಹುರುಳಿಲ್ಲ: ಶಿವನಂಜು

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ಡಿ.ಜೆ .ಅಬ್ರಹಾಂ ಅವರು ಸಲ್ಲಿಸಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕಾಂಗ್ರೆಸ್ ಮುಖಂಡ ಶಿವನಂಜು ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ(ಆ.10) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬ್ಲಾಕ್ ಮೇಲರ್ ಡಿಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ಸಲ್ಲಿಸಿದ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಮೇಲ್ನೋಟಕ್ಕೆ ಸಾಬೀತಾಗಬಹುದಾದ ಆರೋಪಗಳು ಇಲ್ಲದಿದ್ದರೂ ಅವರು ಕೇಳಿರುವ ಕಾಯ್ದೆ ಅಡಿಯಲ್ಲಿ ಪ್ರಾಸಿಕ್ಯೂಷನ್ ಗೆ ಕೊಡಲು ಅವಕಾಶವಿಲ್ಲದಿದ್ದರೂ ಒಂದೇ ದಿನದಲ್ಲಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ದೂರಿದರು.

ಎಚ್‍ಡಿ ಕುಮಾರಸ್ವಾಮಿ ಅವರು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಡುವ ಹಿಂದೆ ಕಾನೂನು ಪ್ರಕಾರ ಗಣಿಗಾರಿಕೆ ಯನ್ನೇ ಸಲ್ಲಿಸದ ಸಾಯಿ ವೆಂಕಟೇಶ್ವರ ಮಿನರಲ್ಸ್ ಎಂಬ ಬೋಗಸ್ ಸಂಸ್ಥೆಯ ಮಾಲೀಕ ವಿನೋದ್ ಗೋಯಲ್ ಎಂಬ ವ್ಯಕ್ತಿ ಗೆ ಬಳ್ಳಾರಿ ಜಿಲ್ಲೆಯ ಸೊಂಡೂರು ತಾಲೂಕಿನ ಬಾವಿ ಹಳ್ಳ ತಿಮ್ಮಪ್ಪನ ಗುಂಡಿ ಎನ್ ಇ ಬಿ ಬ್ಲಾಕ್ ನಲ್ಲಿ 550 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ನಿಯಮ ಮೀರಿ ಅವಕಾಶ ನೀಡಿದ್ದೆ ಕಾರಣ ಎಂದರು.

ಈ ಸಂಬಂಧ ಕರ್ನಾಟಕ ಲೋಕಾಯುಕ್ತವು 2014ರಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದೆ. ಈ ಪ್ರಕರಣದಲ್ಲಿ ಕುಮಾರಸ್ವಾಮಿ ಅವರ ಮೇಲೆ ಅಕ್ರಮ ಗಣಿಗಾರಿಕೆ ಲೀಸ್ ಆರೋಪ ರುಜುವಾತಾದ ಹಿನ್ನೆಲೆಯಲ್ಲಿ ಐಪಿಸಿ ಕಾಯಿದೆ 420, 409 ,465 ,468 ,120 ಬಿ ಹಾಗೂ 511 ರ ಅಡಿಯಲ್ಲಿ ಕುಮಾರಸ್ವಾಮಿ ಅವರನ್ನು ಪ್ರಾಸಿಕ್ಯೂಷನ್ ಮಾಡಲು ಅನುಮತಿ ನೀಡುವಂತೆ ಲೋಕಾಯುಕ್ತ 2023ರಲ್ಲಿ ಮನವಿ ಸಲ್ಲಿಸಿದೆ ಎಂದು ತಿಳಿಸಿದರು. ಮನವಿ ಸಲ್ಲಿಸಿ 9 ತಿಂಗಳಾದರೂ ರಾಜ್ಯಪಾಲರು ಅನುಮತಿ ನೀಡದೆ ಪಕ್ಷಪಾತಿ ಧೋರಣೆ ಅನುಸರಿಸಿದ್ದಾರೆ. ರಾಜಭವನವನ್ನು ಕೇಂದ್ರದ ಬಿಜೆಪಿ ತನ್ನ ಕೈಗೊಂಬೆಯಾಗಿ ಮಾಡಿಕೊಂಡಿದೆ ಎಂದು ದೂರಿದರು.

ರಾಜ್ಯಪಾಲರು ಸಂವಿಧಾನದ ಆಶಯದಂತೆ ನಡೆದುಕೊಂಡಿಲ್ಲ. ಆ ಹುದ್ದೆಯ ಘನತೆ ಗೌರವವನ್ನು ಎತ್ತಿ ಹಿಡಿಯದೆ ಪಕ್ಷಪಾತದಿಂದ ನಡೆದುಕೊಂಡಿದ್ದಾರೆ. ಆದ್ದರಿಂದ ಅವರು ಗೌರವಯುತವಾಗಿ ದೆಹಲಿಗೆ ವಾಪಸ್ ಹೋಗಬೇಕು. ಇಲ್ಲದಿದ್ದರೆ ರಾಜ್ಯಪಾಲರೇ ಗೋ ಬ್ಯಾಕ್ ಚಳುವಳಿಯನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಬೇಕಾಗುತ್ತದೆ ಎಂದರು.

ಅಲ್ಲದೆ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅವರ ಪರಮಾಪ್ತ ನಾಗರಾಜಪ್ಪ ಅವರು ಮೈಶುಗರ್ ಕಾರ್ಖಾನೆಯಲ್ಲಿ 121 ಕೋಟಿ ರೂಪಾಯಿ ಅಕ್ರಮ ಎಸೆಗಿರುವುದು ಸಾಬೀತಾಗಿದೆ. ಆದರೆ ಜೆಡಿಎಸ್ ಮತ್ತು ಬಿಜೆಪಿ ನಾಯಕರುಗಳ ಭ್ರಷ್ಟಾಚಾರ ಮತ್ತು ಅಕ್ರಮಗಳು ರುಜುವಾತಾಗಿದ್ದರೂ ಯಾವ ನೈತಿಕತೆ ಇಟ್ಟುಕೊಂಡು ಪಾದಯಾತ್ರೆ ಮಾಡುತ್ತಿದ್ದಾರೆ ಎನ್ನುವುದನ್ನು ಸಾರ್ವಜನಿಕರಿಗೆ ತಿಳಿಸಲಿ ಎಂದು ಸವಾಲು ಹಾಕಿದರು.

ಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಕೆ ಎಲ್ ನಾಗೇಂದ್ರ ,ನಗರಸಭೆ ಸದಸ್ಯ ಶ್ರೀಧರ್ ,ಉಮ್ಮಡಹಳ್ಳಿ ನಾಗೇಶ್ ಸೇರಿದಂತೆ ಇತರರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕ್ರೀಡಾಲೋಕದ ಸಿಹಿ-ಕಹಿ ಮೆಲುಕು

ಹೊಸ ವರ್ಷದ ಹೊಸ್ತಿಲಲ್ಲಿರುವ ನಾವು 2025ರ ವರ್ಷಪೂರ್ತಿ ಸುಂದರ ಹಾಗೂ ಕಹಿ ಘಟನೆಗಳನ್ನು ಮೆಲುಕು ಹಾಕಿದ್ದು. ಅದೇ ಮಾದರಿಯಲ್ಲಿ ಪ್ರಸಕ್ತ…

10 mins ago

ಕೊಡಗು ಜಿಲ್ಲೆಯಲ್ಲಿ ಹೆಚ್ಚಿದ ಮಂಗಗಳ ಕಾಟ

* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ  ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…

48 mins ago

ಪಚ್ಚೆದೊಡ್ಡಿ ಗ್ರಾಮಕ್ಕೆ ತ್ರಿಸದಸ್ಯ ಸಮಿತಿ ತಂಡ ಭೇಟಿ

ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…

3 hours ago

ತ್ರಿಪುರ ಸುಂದರಿ ಅಮ್ಮನವರ ಜಾತ್ರೆಗೆ ಸಕಲ ಸಿದ್ಧತೆ

ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…

3 hours ago

ಮತ್ತೆ ಆರಂಭವಾದ ಕೋಟೆ ಪೊಲೀಸ್ ಕ್ಯಾಂಟೀನ್

ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…

3 hours ago

ಗುಬ್ಬಚ್ಚಿ ಶಾಲೆಯಲ್ಲಿ ಬರೀ 12 ವಿದ್ಯಾರ್ಥಿಗಳು!

ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…

3 hours ago