ಮಂಡ್ಯ

ಎಸ್‌ಸಿ, ಎಸ್‌ಟಿ ಯೋಜನೆ ಕಾರ್ಯಗತಗೊಳಿಸದ ತಹಶಿಲ್ದಾರ್‌ಗಳಿಗೆ ನೋಟಿಸ್‌ ಜಾರಿ: ಡಿಸಿ ಕುಮಾರ್‌ ಎಚ್ಚರಿಕೆ

ಮಂಡ್ಯ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ( ಎಸ್‌ಸಿ, ಎಸ್‌ಟಿ) ಯೋಜನೆಗೆ ಸಂಬಂಧಿಸಿದಂತೆ ಸರಿಯಾಗಿ ಕಾರ್ಯ ನಿರ್ವಹಿಸದ ಹಾಗೂ ತಾಲ್ಲೂಕು ಮಟ್ಟದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಕುಂದು ಕೊರತೆ ಸಭೆ ಮಾಡದ ತಹಶಿಲ್ದಾರರಿಗೆ ನೋಟೀಸ್ ಜಾರಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ತಿಳಿಸಿದರು.

ಅವರು ಇಂದು ಜಿಲ್ಲಾ ಪಂಚಾಯತ್‌ನ ಕಾವೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಕಾರ್ಯಕ್ರಮಗಳ ಅನುಷ್ಟಾನಕ್ಕಾಗಿ ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆ ನಡೆಸಿ ಮಾತನಾಡಿದರು.

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಅಸ್ಪೃಶ್ಯತೆ ಆಚರಣೆಗೆ ಅವಕಾಶವಿಲ್ಲ. ಎಲ್ಲಾ ವರ್ಗದ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಎಂಬ ನಾಮ ಫಲಕವನ್ನು ದೇವಸ್ಥಾನಗಳಲ್ಲಿ ಅನಾವರಣಗೊಳಿಸುವಂತೆ ಈ ಹಿಂದಿನ ಸಭೆಗಳಲ್ಲಿ ಸೂಚಿಸಲಾಗಿತ್ತು. ಈ ನಾಮಫಲಕವನ್ನು ಕಿಡಿಗೇಡಿಗಳು ತೆರವುಗೊಳಿಸಿದ್ದಲ್ಲಿ ಕ್ರಮ ಕೈಗೊಳ್ಳಿ ಎಂದು ನಿರ್ದೇಶಿಸಿದರು.

ಜಿಲ್ಲೆಯಾದ್ಯಂತ ಅಪೂರ್ಣಗೊಂಡಿರುವ ಡಾ ಬಿ ಆರ್ ಅಂಬೇಡ್ಕರ್ ಭವನದ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಈಗಾಗಲೇ 7,8 ವರ್ಷಗಳ ಹಿಂದೆ ಪೂರ್ಣಗೊಂಡಿರುವ ಮೂಲ ಸೌಕರ್ಯ ಕೊರತೆಯಿರುವ ಭವನಗಳಲ್ಲಿ ನೀರು ಹಾಗೂ ಶೌಚಾಲಯಗಳನ್ನು ಸ್ವಚ್ಛವಾಗಿಟ್ಟುಕೊಳ್ಳಿ. ಸಂಬಂಧಿಸಿದ ಕಾರ್ಮಿಕರುಗಳಿಗೆ ಸರಿಯಾದ ಸಮಯಕ್ಕೆ ಹಣ ಪಾವತಿಸಿ ಎಂದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಂಡಗಳ ನಿರುದ್ಯೋಗ ಯುವಕ/ ಯುವತಿಯರಿಗೆ ಕೌಶಲ್ಯಾಭಿವೃದ್ಧಿ ಇಲಾಖಾ ವತಿಯಿಂದ ನೋದಾಯಿತವಾಗಿರುವ ತರಬೇತಿ ಕೇಂದ್ರಗಳಲ್ಲಿ ಬ್ಯೂಟಿಷಿಯನ್ ತರಬೇತಿ ನೀಡಬೇಕು. ಇದಕ್ಕೆ ಸಂಬಂಧಿಸಿದಂತೆ ಪತ್ರಿಕೆಗಳ ಮೂಲಕ ವ್ಯಾಪಕ ಪ್ರಚಾರವಾಗಬೇಕು ಎಂದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಶವವನ್ನು ಸ್ಮಶಾನಕ್ಕೆ ಒತ್ತೊಯ್ಯಲು ವಾಹನದ ವ್ಯವಸ್ಥೆ ಇರುತ್ತದೆ. ಆದರೆ ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳಲ್ಲಿ ವ್ಯವಸ್ಥೆ ಕಲ್ಪಿಸಲು ಚಿಂತಿಸಲಾಗುವುದು ಎಂದರು.

ಯಾವುದೇ ಸರ್ಕಾರಿ ಇಲಾಖೆಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ಪರಿಶಿಷ್ಟ ಜಾತಿ/ವರ್ಗದ ಹೆಸರಿನಲ್ಲಿ ಅನ್ಯರಿಗೆ ಜಾತಿ ಪ್ರಮಾಣ ಪತ್ರ ನೀಡುವ ಬಗ್ಗೆ ದೂರು ಬಂದಲ್ಲಿ ಅಥವಾ ಸಾಬಿತಾದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.

ಅನುಮತಿ ಕಡ್ಡಾಯ
ಲೋಕೋಪಯೋಗಿ ಇಲಾಖೆ ಹಾಗೂ ಪಂಚಾಯತ್ ಇಂಜಿನಿಯರಿಂಗ್ ವಿಭಾಗ ಹಾಗೂ ಇನ್ನಿತರೆ ಇಲಾಖೆಗಳು ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಅನುದಾನದಡಿ ರಸ್ತೆ ಕಾಮಗಾರಿ ಕೈಗೊಳ್ಳುವ ಸಂದರ್ಭದಲ್ಲಿ ಶೇಕಡಾ 40% ರಷ್ಟು ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದವರು ಇರಬೇಕೆಂಬ ನಿಯಮವಿದೆ. ಇದರೊಂದಿಗೆ ಕಾಮಗಾರಿ ಕೈಗೊಳ್ಳುವ ಮುನ್ನ ಜಿಲ್ಲಾ/ ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ಅನುಮತಿ ಕಡ್ಡಾಯ ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಉಪ ವಿಭಾಗಾಧಿಕಾರಿ ಶಿವಮೂರ್ತಿ, ಜಿಲ್ಲಾ ಪಂಚಾಯತ್ ನ ಉಪ ಕಾರ್ಯದರ್ಶಿ ಆನಂದ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಾ ಸಿದ್ದಲಿಂಗೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಗಾಂಜಾ ಮಾರಾಟ ತಡೆಗಟ್ಟಿ

ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಭಾಗಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಕೆಲವು ಚಾಲಕರು ಗಾಂಜಾ ಸೇವಿಸಿ ವಾಹನ ಚಾಲನೆ…

8 mins ago

ಓದುಗರ ಪತ್ರ: ಕೇರಳದಲ್ಲಿ ಉಚಿತ ಶಿಕ್ಷಣ ಶ್ಲಾಘನೀಯ

ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ…

20 mins ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ನಂಜನಗೂಡು ತಾಲ್ಲೂಕು ಬೆಳಗುಂದ ಗ್ರಾಮದಲ್ಲಿ ಬಸ್ ತಂಗುದಾಣವಿಲ್ಲದೆ ಪ್ರತಿದಿನ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲಿಯೇ…

28 mins ago

ಓದುಗರ ಪತ್ರ: ಬಸ್‌ಗಳ ಮೇಲೆ ಗುಟ್ಕಾ ಜಾಹೀರಾತು ನಿಷೇಧ ಸ್ವಾಗತಾರ್ಹ

ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್‌ಗಳ ಮೇಲೆ ಅಳವಡಿಸಿರುವ ಗುಟ್ಕಾ ಹಾಗೂ ತಂಬಾಕು…

39 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: 24 ರೂ. ಹಿಡಿದು ಮುಂಬೈಗೆ ಬಂದ ಮುನ್ನಾ ಈಗ ಸೆಲೆಬ್ರೆಟಿ ಫೋಟೋಗ್ರಾಫರ್!

ಪ್ರಸಿದ್ಧ ಬಾಲಿವುಡ್ ತಾರೆಗಳ ಜೊತೆಯಲ್ಲಿ ಕೆಲಸ ಮಾಡಿದ ಅನುಭವ ಮುಂಬೈ ಎಂಬ ಮಾಯಾನಗರಿಗೆ ಪ್ರತಿ ದಿನ ಬದುಕು ಹುಡುಕಿಕೊಂಡು, ಕನಸುಗಳನ್ನು…

3 hours ago

ಟಿ-20 ವಿಶ್ವಕಪ್: ಕೌಂಟ್‌ಡೌನ್ ಶುರು

ಆರ್.ಎಲ್.ಮಂಜುನಾಥ್ ಮೈಸೂರು: ಕ್ರಿಕೆಟ್ ಪ್ರಿಯರಿಗೆ ಈಗ ಹಬ್ಬವೋ ಹಬ್ಬ. ಅದರಲ್ಲೂ ಕ್ರಿಕೆಟ್‌ನ ಭಾಷ್ಯವನ್ನೇ ಬದಲಿಸುತ್ತಿರುವ ಟಿ-೨೦ ಪಂದ್ಯಗಳು ಎಲ್ಲರಿಗೂ ಅಚ್ಚುಮೆಚ್ಚು.…

3 hours ago