Mysore
25
light rain

Social Media

ಭಾನುವಾರ, 03 ನವೆಂಬರ್ 2024
Light
Dark

ಹಿಂದೂ ಕಾರ್ಯಕರ್ತರಿಗೆ ನೋಟೀಸ್: ಪೊಲೀಸರ ವಿರುದ್ಧ ಪ್ರತಿಭಟನೆ

ಮಂಡ್ಯ: ಕೆರಗೋಡು ಹನುಮ ಧ್ವಜ ಸ್ಥಂಭ ವಿವಾದ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗಳಲ್ಲಿ ಭಾಗಿಯಾಗಿದ್ದ ಕೆಲವರಿಗೆ ಪೊಲೀಸರು ನೋಟಿಸ್‌ ನೀಡಿರುವುದನ್ನು ಖಂಡಿಸಿ, ಹಿಂದೂ ಸಂಘಟನೆ ಕಾರ್ಯಕರ್ತರು ಕೆರಗೋಡಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಇಂದು (ಮೇ.11) ಕೆರಗೋಡು ಬಸ್‌ ನಿಲ್ದಾಣದಲ್ಲಿ ಜಮಾವಣೆಗೊಂಡ ಹಿಂದೂ ಕಾರ್ಯಕರ್ತರು, ಪ್ರತಿಭಟನೆಗೂ ಮುನ್ನ ಹನುಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಕೆರಗೋಡು ಪೊಲೀಸ್‌ ಠಾಣೆಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ದಾರಿಯುದ್ದಕ್ಕೂ ಪೊಲೀಸರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಹನುಮ ಧ್ವಜ ಹೋರಾಟದಲ್ಲಿ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರಿಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ. ಕೆಲವರಿಗೆ ರೌಡಿ ಶೀಟ್ ತೆರೆಯಲು ಪೊಲೀಸರು ಮುಂದಾಗಿದ್ದು, ರೌಡಿ ಶೀಟ್ ಓಪನ್ ಮಾಡುವ ಸಂಬಂಧ ಮೂವರಿಗೆ ನೋಟಿಸ್ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಪೊಲೀಸರ ಮೂಲಕ ಹಿಂದೂಗಳ ಹೋರಾಟ ಹತ್ತಿಕ್ಕುವ ಕೆಲಸಕ್ಕೆ ಮುಂದಾಗಿದೆ ಎಂದು ಪ್ರತಿಭಟನಕಾರರು ಕಿಡಿ ಕಾರಿದರು.

ಪೊಲೀಸ್‌ ಠಾಣೆ ಮುಂಭಾಗ ಧರಣಿ ಕುಳಿತ ಪ್ರತಿಭಟನಕಾರರು ರಾಜಕೀಯ ಪ್ರಭಾವಕ್ಕೊಳಗಾಗಿ ಪೊಲೀಸರು ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ದಬ್ಬಾಳಿಕೆ ಮಾಡುತ್ತಿರುವ ಪೊಲೀಸರನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜೆಡಿಎಸ್‌ ಮುಖಂಡ ಬಿ.ಆರ್‌ ರಾಮಚಂದ್ರ, ಮುಖಂಡರಾದ ರಘುನಂದನ್‌, ವಸಂತಕುಮಾರ್‌, ಯೋಗೇಶ್‌, ನರಸಿಂಹಮೂರ್ತಿ, ವಿರೂಪಾಕ್ಷ, ಬಾಲು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Tags: