ಮಂಡ್ಯ: ಕೆರಗೋಡು ಹನುಮ ಧ್ವಜ ಸ್ಥಂಭ ವಿವಾದ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗಳಲ್ಲಿ ಭಾಗಿಯಾಗಿದ್ದ ಕೆಲವರಿಗೆ ಪೊಲೀಸರು ನೋಟಿಸ್ ನೀಡಿರುವುದನ್ನು ಖಂಡಿಸಿ, ಹಿಂದೂ ಸಂಘಟನೆ ಕಾರ್ಯಕರ್ತರು ಕೆರಗೋಡಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಇಂದು (ಮೇ.11) ಕೆರಗೋಡು ಬಸ್ ನಿಲ್ದಾಣದಲ್ಲಿ ಜಮಾವಣೆಗೊಂಡ ಹಿಂದೂ ಕಾರ್ಯಕರ್ತರು, ಪ್ರತಿಭಟನೆಗೂ ಮುನ್ನ ಹನುಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಕೆರಗೋಡು ಪೊಲೀಸ್ ಠಾಣೆಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ದಾರಿಯುದ್ದಕ್ಕೂ ಪೊಲೀಸರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಹನುಮ ಧ್ವಜ ಹೋರಾಟದಲ್ಲಿ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರಿಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ. ಕೆಲವರಿಗೆ ರೌಡಿ ಶೀಟ್ ತೆರೆಯಲು ಪೊಲೀಸರು ಮುಂದಾಗಿದ್ದು, ರೌಡಿ ಶೀಟ್ ಓಪನ್ ಮಾಡುವ ಸಂಬಂಧ ಮೂವರಿಗೆ ನೋಟಿಸ್ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಪೊಲೀಸರ ಮೂಲಕ ಹಿಂದೂಗಳ ಹೋರಾಟ ಹತ್ತಿಕ್ಕುವ ಕೆಲಸಕ್ಕೆ ಮುಂದಾಗಿದೆ ಎಂದು ಪ್ರತಿಭಟನಕಾರರು ಕಿಡಿ ಕಾರಿದರು.
ಪೊಲೀಸ್ ಠಾಣೆ ಮುಂಭಾಗ ಧರಣಿ ಕುಳಿತ ಪ್ರತಿಭಟನಕಾರರು ರಾಜಕೀಯ ಪ್ರಭಾವಕ್ಕೊಳಗಾಗಿ ಪೊಲೀಸರು ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ದಬ್ಬಾಳಿಕೆ ಮಾಡುತ್ತಿರುವ ಪೊಲೀಸರನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜೆಡಿಎಸ್ ಮುಖಂಡ ಬಿ.ಆರ್ ರಾಮಚಂದ್ರ, ಮುಖಂಡರಾದ ರಘುನಂದನ್, ವಸಂತಕುಮಾರ್, ಯೋಗೇಶ್, ನರಸಿಂಹಮೂರ್ತಿ, ವಿರೂಪಾಕ್ಷ, ಬಾಲು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…