Mysore
25
broken clouds

Social Media

ಮಂಗಳವಾರ, 13 ಜನವರಿ 2026
Light
Dark

ಏ.1 ರಿಂದ ನರೇಗಾ ಕೂಲಿ ದರ ಹೆಚ್ಚಳ

ಮಂಡ್ಯ : ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಅಕುಶಲ ಕೂಲಿಕೆಲಸ ಮಾಡುವ ಗ್ರಾಮೀಣ ಕೂಲಿಕಾರರ ದಿನಗೂಲಿ ದರವನ್ನು 370 ರೂ ಗಳಿಗೆ ಹೆಚ್ಚಳ ಮಾಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಮಂತ್ರಾಲಯವು ಆದೇಶ ಹೊರಡಿಸಿದೆ ಎಂದು ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಂದಿನಿ ಕೆ.ಆರ್  ಅವರು ತಿಳಿಸಿದ್ದಾರೆ.

2024-25 ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಕೂಲಿ ಕಾರ್ಮಿಕರ ದಿನಗೂಲಿ ದರ 349 ರೂ.ಗಳಿದ್ದು, 2025-26 ನೇ ಸಾಲಿನಲ್ಲಿ ಏಪ್ರಿಲ್ 01 ರಿಂದ 370 ರೂ. ಗಳ ದಿನಗೂಲಿ ದರವನ್ನು ನಿಗಧಿಪಡಿಸಿದೆ.

ಮನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶದ ಪತ್ರಿ ಆರ್ಹ ಕುಟುಂಬಕ್ಕೂ ಒಂದು ಆರ್ಥಿಕ ವರ್ಷದಲ್ಲಿ 100 ದಿನಗಳ ಅಕುಶ ಕೂಲಿ ಕೆಲಸ ಕೊಡಲಾಗುತ್ತದೆ. ಒಂದು ಕುಟುಂಬ ವರ್ಷದಲ್ಲಿ ನೂರು ದಿನ ಕೆಲಸ ಮಾಡಿದರೆ 37 ಸಾವಿರ ರೂ. ಗಳ ಕೂಲಿ ಹಣ ಪಡೆದುಕೊಳ್ಳಬಹುದು. ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಗಂಡು-ಹೆಣ‍್ಣಿಗೂ 370 ರೂ ಸಮಾನ ಕೂಲಿ ವೇತನ ಪಡೆಯಬಹುದು ಎಂದು ತಿಳಿಸಿದ್ದಾರೆ.

Tags:
error: Content is protected !!