ಮಂಡ್ಯ : ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಅಕುಶಲ ಕೂಲಿಕೆಲಸ ಮಾಡುವ ಗ್ರಾಮೀಣ ಕೂಲಿಕಾರರ ದಿನಗೂಲಿ ದರವನ್ನು 370 ರೂ ಗಳಿಗೆ ಹೆಚ್ಚಳ ಮಾಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಮಂತ್ರಾಲಯವು ಆದೇಶ ಹೊರಡಿಸಿದೆ ಎಂದು ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಂದಿನಿ ಕೆ.ಆರ್ ಅವರು ತಿಳಿಸಿದ್ದಾರೆ.
2024-25 ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಕೂಲಿ ಕಾರ್ಮಿಕರ ದಿನಗೂಲಿ ದರ 349 ರೂ.ಗಳಿದ್ದು, 2025-26 ನೇ ಸಾಲಿನಲ್ಲಿ ಏಪ್ರಿಲ್ 01 ರಿಂದ 370 ರೂ. ಗಳ ದಿನಗೂಲಿ ದರವನ್ನು ನಿಗಧಿಪಡಿಸಿದೆ.
ಮನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶದ ಪತ್ರಿ ಆರ್ಹ ಕುಟುಂಬಕ್ಕೂ ಒಂದು ಆರ್ಥಿಕ ವರ್ಷದಲ್ಲಿ 100 ದಿನಗಳ ಅಕುಶ ಕೂಲಿ ಕೆಲಸ ಕೊಡಲಾಗುತ್ತದೆ. ಒಂದು ಕುಟುಂಬ ವರ್ಷದಲ್ಲಿ ನೂರು ದಿನ ಕೆಲಸ ಮಾಡಿದರೆ 37 ಸಾವಿರ ರೂ. ಗಳ ಕೂಲಿ ಹಣ ಪಡೆದುಕೊಳ್ಳಬಹುದು. ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಗಂಡು-ಹೆಣ‍್ಣಿಗೂ 370 ರೂ ಸಮಾನ ಕೂಲಿ ವೇತನ ಪಡೆಯಬಹುದು ಎಂದು ತಿಳಿಸಿದ್ದಾರೆ.
ಮಹಾದೇಶ್ ಎಂ ಗೌಡ ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…
ಮಹಾದೇಶ್ ಎಂ ಗೌಡ ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…
ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…
ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…