ಮಂಡ್ಯ: ಎಎನ್‌ಎಸ್‌ಎಸ್ ಶಿಬಿರಗಳಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಹಾಗೂ ಸಮಾಜ ಸೇವೆ ಮಾಡುವ ಮನೋಭಾವ ಬೆಳೆಯುತ್ತದೆ ಎಂದು ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶೇಷ ಅಧಿಕಾರಿ ಡಾ.ಕೆ.ಎಂ.ಹರಿಣಿ ಕುಮಾರ್ ತಿಳಿಸಿದರು.
ಮಂಡ್ಯ ತಾಲೂಕಿನ ಚಿಕ್ಕಬಳ್ಳಿ- ಆನಸೋಸಲು ಗ್ರಾಮದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಮಂಡ್ಯ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಕೃಷಿ ಮಹಾವಿದ್ಯಾಲಯ ವಿ.ಸಿ. ಫಾರಂ ವತಿಯಿಂದ ನಡೆದ ದ್ವಿತೀಯ ವರ್ಷದ ಬಿಎಸ್ಸಿ ಕೃಷಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ 2025-26 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ಸಂತೋಷದ ಜೊತೆಗೆ ಅದಕ್ಕೆ ತಕ್ಕಂತೆ ಪ್ರತಿಫಲ ಸಿಗುತ್ತದೆ ಎಂದರು.
ಜಿಲ್ಲೆಯಲ್ಲಿ ಬಯೋ ಎಥನಾಲ್‌ಗೆ ರೈತರು ಹೆಚ್ಚು ಒತ್ತುಕೊಡಬೇಕು. ಎಥೆನಾಲ್ ಬಳಕೆ ಮಾಡಲು ಜಿಲ್ಲೆ ಸೂಕ್ತವಾಗಿದೆ. ರೈತರು ಎಥನಾಲ್ ಮಾಡುವುದರಿಂದ ಅವರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ರೈತರಿಂದ ಸಾಧ್ಯಕ್ಕೆ ಆಹಾರ ಮತ್ತು ಮೇವು ಸಿಗುತ್ತಿದೆ. ಬಯೋ ಪೆಟ್ರೋಲ್, ಬಯೋ ಡೀಸಲ್, ವಿದ್ಯುಚ್ಛಕ್ತಿ ರೈತರಿಂದ ಬರಬೇಕು ಎಂದು ತಿಳಿಸಿದರು.
ಎನ್‌ಎಸ್‌ಎಸ್ ಶಿಬಿರಗಳಲ್ಲಿ ಸ್ವಚ್ಛತೆ ಹಾಗೂ ಇತರೆ ವಿಶೇಷ ಕಾರ್ಯಕ್ರಮಗಳ ಜೊತೆಗೆ ಉಪನ್ಯಾಸ ಕಾರ್ಯಕ್ರಮಗಳು ನಡೆಯುತ್ತವೆ. ಇಲ್ಲಿನ ಗ್ರಾಮಸ್ಥರು ಶಿಬಿರವನ್ನು ಯಶಸ್ವಿಯಾಗಿ ನಡೆಸಲು ಸಂಪೂರ್ಣ ಸಹಕಾರ ನೀಡುತ್ತಾರೆ. ಎಲ್ಲವನ್ನು ಬಳಸಿಕೊಂಡು ವಿಶೇಷ ಶಿಬಿರ ಆಯೋಜನೆ ಮಾಡಿ ಎಂದು ತಿಳಿಸಿದರು.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…