ಮಂಡ್ಯ

ನುಡಿಹಬ್ಬ: ಸಮ್ಮೇಳನಾಧ್ಯಕ್ಷರಾಗಿ ಡಾ.ರಾಮೇಗೌಡ ಆಯ್ಕೆಗೆ ಸಲಹೆ

ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರನ್ನಾಗಿ ಸಾಹಿತ್ಯ ವಲಯದ ಡಾ.ರಾಗೌ ಕಾವ್ಯನಾಮದಿಂದ ಜನಪ್ರಿಯರಾದ ಡಾ.ರಾಮೇಗೌಡ ಅವರನ್ನು ಆಯ್ಕೆ ಮಾಡುವಂತೆ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಡಿ.ಪಿ.ಸ್ವಾಮಿ ಸಲಹೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಗೌ ಅವರು ಇದುವರೆಗೂ ೮೫ ಕೃತಿಗಳನ್ನು ರಚಿಸಿದ್ದಾರೆ. ಕವಿಯಾಗಿ, ವಿಮರ್ಶಕರಾಗಿ, ಜಾನಪದ ವಿದ್ಯಾಂಸರಾಗಿ, ನಾಟಕಕಾರರಾಗಿ, ಗ್ರಂಥ ಸಂಪಾದಕರಾಗಿ ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇ ಕೊಡುಗೆಯನ್ನು ನೀಡಿದ್ದಾರೆ ಎಂದರು.

ಮಂಡ್ಯ ಜಿಲ್ಲೆಯವರೇ ಆದ ರಾಮೇಗೌಡರು ಮದ್ದೂರು ತಾಲೂಕಿನ ಈರೇಗೌಡನದೊಡ್ಡಿ ಗ್ರಾಮದವರಾಗಿದ್ದು, ತಮ್ಮ ೫ನೇ ತರಗತಿ ಶಿಕ್ಷಣದವರೆಗೆ ಮಾತ್ರ ಸ್ವಗ್ರಾಮದಲ್ಲಿದ್ದರು. ನಂತರ ಅವರ ಶೈಕ್ಷಣಿಕ ಹಾಗೂ ವೃತ್ತಿ ಜೀವನ ಮೈಸೂರಿನಲ್ಲಿ ನಡೆಸಿದ್ದು, ಸಾಹಿತ್ಯಿಕವಾಗಿ ರಾಜ್ಯಕ್ಕೆ ತಮ್ಮ ಬಹುತೇಕ ಪ್ರಕಾರಗಳಲ್ಲಿ ಕೆಲಸ ಮಾಡಿದ್ದಾರೆ ಐದು ಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಡಾ.ರಾಮೇಗೌಡರು ಸಮ್ಮೇಳನಾಧ್ಯಕ್ಷರಾಗಲು ಸೂಕ್ತ ಎಂದು ಹೇಳಿದರು.

ಸದರಿ ಸಮ್ಮೇಳನವು ಕನ್ನಡ ಸಾಹಿತ್ಯ ಸಮ್ಮೇಳನವಾಗಿರುವುದರಿಂದ ಸಾಹಿತಿಗಳನ್ನೇ ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಬೇಕು. ಕನ್ನಡ ಸಮ್ಮೇಳನಗಳನ್ನು ನಡೆಸಿ ಸಾಹಿತ್ಯೇತರರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಿಕೊಳ್ಳಲಿ ಎಂದು ಸಾಹಿತ್ಯೇತರರನ್ನು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಚರ್ಚೆಗೆ ವಿರೋಧ ವ್ಯಕ್ತಪಡಿಸಿದರು.

ಅದ್ದೂರು ಸಮ್ಮೇಳನದ ಬದಲಿಗೆ ಸಾಹಿತ್ಯ ಚಟುವಟಿಕೆಗಳಿಗೆ ಆಧ್ಯತೆ ನೀಡುವಂತೆ ಸಾಹಿತಿ ಬೋರೇಗೌಡ ಚಿಕ್ಕಮರಳಿ ಅವರ ಮಾತಿಗೆ ಸಹ ಮತ ವ್ಯಕ್ತಪಡಿಸಿದ ಡಿ.ಪಿ.ಸ್ವಾಮಿ ಅವರು ರಾಜ್ಯದ ಶಾಲೆಗಳನ್ನು ಅಭಿವೃದ್ಧಿ ಪಡಿಸಿ, ಆಧುನೀಕ ರೀತಿಯಲ್ಲಿ ಶಿಕ್ಷಣ ನೀಡುತ್ತ ಕನ್ನಡ ಸಾಹಿತ್ಯ ಪರಿಷತ್ತು ಗಮನ ಹರಿಸಬೇಕು. ಸಮ್ಮೇಳನಗಳಿಗೆ ಕೋಟ್ಯಾಂತರ ರೂಗಳನ್ನು ವ್ಯಯಿಸುವ ಬದಲಿಗೆ ಎರಡು ವರ್ಷಕ್ಕೊಮ್ಮೆ ಸಮ್ಮೇಳನ ನಡೆಸಿ ಸಮ್ಮೇಳನಗಳಿಗೆ ವ್ಯಯಿಸುವ ಹಣವನ್ನು ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ವ್ಯಯಿಸಲು ಸಾಹಿತ್ಯ ಪರಿಷತ್ತು ಕಾರ್ಯ ರೂಪಿಸಲಿ ಎಂದು ಸಲಹೆಯನ್ನು ನೀಡಿದರು.

ಗೋಷ್ಠಿಯಲ್ಲಿ ಕರ್ನಾಟಕ ಸಂಘದ ನಿರ್ದೇಶಕ ನಾಗಪ್ಪ, ಕಾರಸವಾಡಿ ಮಹದೇವು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

21 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

25 mins ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

38 mins ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

45 mins ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

3 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

4 hours ago