ಮಂಡ್ಯ

ಮತದಾನ ದಿನದಂದು ಮತಗಟ್ಟೆಗಳಲ್ಲಿ ನಡೆಯುವ ಪ್ರಕ್ರಿಯೆಯನ್ನು ವೀಕ್ಷಿಸಿ ವರದಿ ನೀಡಬೇಕು: ನೀರಜ್ ಕುಮಾರ್

ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ನಿಯೋಜನೆಗೊಂಡಿರುವ ಸೂಕ್ಷ್ಮವೀಕ್ಷಕರು ಮತಗಟ್ಟೆಯ ಹೊರಗೆ ಹಾಗೂ ಒಳಗೆ ನಡೆಯುವ ಎಲ್ಲಾ ಪ್ರಕ್ರಿಯೆಗಳನ್ನು ವೀಕ್ಷಿಸಿ ವರದಿ ನೀಡಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕ ನೀರಜ್ ಕುಮಾರ್ ಸೂಚಿಸಿದರು.

ಇಂದು ನಗರದ ಡಾ: ಬಿ.ಆರ್.ಅಂಬೇಡ್ಕರ್ ‌ಭವನದಲ್ಲಿ ನಡೆದ ಸೂಕ್ಷ್ಮವೀಕ್ಷಕರುಗಳಿಗೆ ಏರ್ಪಡಿಸಲಾಗಿದ್ದ ತರಬೇತಿಯಲ್ಲಿ ಭಾಗವಹಿಸಿ ಮಾತನಾಡಿದರು. ಸೂಕ್ಷ್ಮ ವೀಕ್ಷಕರನ್ನು ಚುನಾವಣಾ ಆಯೋಗದಿಂದ ನೇಮಕ ಮಾಡಲಾಗಿರುತ್ತದೆ. ಪ್ರತಿಯೊಂದು‌ ಪ್ರಕ್ರಿಯೆಯನ್ನು ಸಿ.ಸಿ.ಟಿ.ವಿ ರೀತ್ಯ ದಾಖಲು ಮಾಡಿಕೊಂಡು ಸಾಮಾನ್ಯ ವೀಕ್ಷಕರಿಗೆ ಮಾತ್ರ ವರದಿ ಮಾಡಬೇಕು ಎಂದು ಮಾಹಿತಿ ನೀಡಿದರು.

ಮತದಾನ ಪ್ರಾರಂಭವಾಗುವ 90 ನಿಮಿಷಗಳ ಮೊದಲು ತಮಗೆ ನಿಯೋಜಿಸಿರುವ ಮತಗಟ್ಟೆಯಲ್ಲಿ ವರದಿ ಮಾಡಿಕೊಳ್ಳಬೇಕು. ಯಾವುದೇ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದಲ್ಲಿ ಅಣುಕು ಮತದಾನ ನಡೆಸಿ ವರದಿ ನೀಡಬೇಕು ಎಂದರು.

ಸೂಕ್ಷ್ಮ ವೀಕ್ಷಕರು ಚುನಾವಣಾ ಆಯೋಗದ ಕಣ್ಣು ಮತ್ತು ಕಿವಿಗಳ ರೀತಿ ಕಾರ್ಯನಿರ್ವಹಿಸಿ ಯಾವುದೇ ಅಹಿತಕರ ಘಟನೆ ಕಂಡುಬಂದಲ್ಲಿ ತಕ್ಷಣ ವರದಿ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಡಾ. ಕುಮಾರ ಮಾತನಾಡಿ ಸೂಕ್ಷ್ಮ ವೀಕ್ಷಕರು ಮತಗಟ್ಟೆಯ 100 ರಿಂದ 200 ಮೀಟರ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕ್ರಮಗಳ ಬಗ್ಗೆ ನಿಗಾ ವಹಿಸಬೇಕು. ಮತಗಟ್ಟೆಯ ಒಳಗೆ ಮೊಬೈಲ್ ಫೋನ್ ತೆಗೆದುಕೊಂಡು ಹೋಗುವಂತಿಲ್ಲ. ಮತದಾನದ ಗೌಪ್ಯತೆ ಕಾಪಡದೇ ಉಲ್ಲಂಘನೆ ಮಾಡುವುದು ಕಂಡುಬಂದಲ್ಲಿ ಆರ್.ಪಿ. ಆ್ಯಕ್ಟ್ ಅಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಗೆ ನೀಡಿದರು.

ತರಬೇತಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಹೆಚ್ ಎಲ್ ನಾಗರಾಜು, ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲ ಎಸ್ ಹೆಚ್, ರಾಜ್ಯ ಮಟ್ಟದ ಮಾಸ್ಟರ್ ಟ್ರೈನರ್ ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

17 mins ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

19 mins ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

20 mins ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

22 mins ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ

ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…

30 mins ago

ಬೈಕ್‌ಗೆ ಲಾರಿ ಡಿಕ್ಕಿ : ಸವಾರ ಸಾವು, ಮತ್ತೊರ್ವ ಗಂಭೀರ

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…

34 mins ago