ಮಂಡ್ಯ: ಅಕ್ಟೋಬರ್.4ರಿಂದ 7ರವರೆಗೆ ಶ್ರೀರಂಗಪಟ್ಟಣದಲ್ಲಿ ನಾಡಹಬ್ಬ 414ನೇ ದಸರಾವನ್ನು ಆಯೋಜಿಸಲಾಗಿದೆ.
ಅಕ್ಟೋಬರ್.4 ರಂದು ಮಧ್ಯಾಹ್ನ 12.30ಕ್ಕೆ ನಂದಿಧ್ವಜ ಪೂಜೆ ನೆರವೇರಿಸಲಾಗುವುದು. ಮಧ್ಯಾಹ್ನ 2.30ರಿಂದ 3 ಗಂಟೆಯವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಾಡದೇವರೆ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಹಾಗೂ ಜಂಬೂಸವಾರಿ ಮೆರವಣಿಗೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಚಾಲನೆ ನೀಡಲಿದ್ದಾರೆ.
ಅಂದು ಸಂಜೆ ಶ್ರೀರಂಗನಾಥಸ್ವಾಮಿ ದೇವಾಲಯದ ಆವರಣದ ಶ್ರೀರಂಗ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ನಡೆಯಲಿದೆ.
ಸಾಂಸ್ಕೃತಿಕ ದಸರಾ ಕಾರ್ಯಕ್ರಮದಲ್ಲಿ ರಾಜ್ಯ ಸಚಿವರು ಹಾಗೂ ಶಾಸಕರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.
ಅಕ್ಟೋಬರ್.7ರವರೆಗೂ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಇದಕ್ಕೆ ಮಂಡ್ಯ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…