ಮಂಡ್ಯ

ಚಂದ್ರಶೇಖರ ಸ್ವಾಮೀಜಿ ಮೇಲಿನ FIR ಹಿಂಪಡೆಯಲು ಒಕ್ಕಲಿಗ ಸೇವಾ ಸಂಸ್ಥೆ ಮನವಿ

ಮಂಡ್ಯ: ವಿಶ್ವ ಮಾನವ ಒಕ್ಕಲಿಗರ ಮಠದ ಚಂದ್ರಶೇಖರ ಸ್ವಾಮೀಜಿ ಅವರ ಮೇಲೆ ಹಾಕಿರುವ ಎಫ್‌ಐಆರ್ ಅನ್ನು ಸರ್ಕಾರ ಹಿಂಪಡೆಯಲು ಮುಂದಾಗಬೇಕು ಎಂದು ಒಕ್ಕಲಿಗ ಸೇವಾ ಟ್ರಸ್ಟ್‌ನ ಅಧ್ಯಕ್ಷ ತಮ್ಮಯ್ಯ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಮೀಜಿ ಅವರಿಗೆ ವಯಸ್ಸಾಗಿದ್ದು, ಹಿರಿಯರೂ ಆಗಿದ್ದು, ಬಾಯ್ತಪ್ಪಿನಿಂದ ಹೇಳಿಕೆ ನೀಡಿದ್ದರು. ತಮ್ಮ ಹೇಳಿಕೆಯಿಂದ ತಪ್ಪಾಗಿದೆಯೆಂದು ಕ್ಷಮೆಯನ್ನೂ ಕೇಳಿದ್ದಾರೆ. ಅದನ್ನು ಪರಿಗಣಿಸಿ, ಸರ್ಕಾರ ಎಫ್‌ಐಆರ್‌ನ್ನು ಹಿಂಪಡೆಯಬೇಕೆಂದು ಕೋರಿದರು.

ಸದರಿ ಸ್ವಾಮಿಗಳು ಒಂದು ಸಮುದಾಯಕ್ಕೆ ಮಾತ್ರ ಸ್ವಾಮೀಜಿಗಳಲ್ಲ, ಒಂದು ವೇಳೆ ಸರ್ಕಾರ ಎಫ್‌ಐಆರ್ ಹಿಂಪಡೆಯದೇ ಇದ್ದರೆ ಒಕ್ಕಲಿಗ ಸಮುದಾಯದ ಸೇರಿದಂತೆ ಎಲ್ಲಾ ಸಂಘ ಸಮಸ್ಥೆಗಳು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಟ್ರಸ್ಟ್‌ನ ಕಾರ್ಯಾಧ್ಯಕ್ಷ ಎಲ್.ಕೃಷ್ಣ ಮಾತನಾಡಿ, ರಾಜ್ಯದ ರಾಜಕೀಯ ಮುಖಂಡರು ಈ ಸಂಬಂಧ ಗಮನ ಹರಿಸಿ ಸದರಿ ಎಫ್‌ಐಆರ್ ಹಿಂತೆಗೆಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಈ ರೀತಿ ಸ್ವಾಮೀಜಿಗಳ ಮೇಲೆ ತನಿಖೆಯಾದರೆ ಒಕ್ಕಲಿಗ ಸಮಾಜಕ್ಕೆ ಕಳಂಕವಾಗಲಿದೆ. ಸರ್ಕಾರ ಸ್ವಾಮೀಜಿಗಳ ವಿರುದ್ಧ ವಿಚಾರಣೆಯನ್ನು ರದ್ದು ಮಾಡಬೇಕೆಂದು ಮನವಿ ಮಾಡಿದರು.

ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಕೆ.ಸಿ.ರವೀಂದ್ರ ಮಾತನಾಡಿ, ಸ್ವಾಮೀಜಿಗಳು ಮಾತನಾಡುವ ವೇಳೆ ಉದ್ವೇಗದಿಂದ ಲೋಪವಾಗಿದೆ. ಸ್ವಾಮೀಜಿಗಳು ಕ್ಷಮೆಯಾಚನೆ ಮಾಡಿದ್ದು, ಇದನ್ನು ಮುಂದುವರೆಸದೇ ಸದರಿ ಪ್ರಕರಣದಿಂದ ಸ್ವಾಮೀಜಿಯವರನ್ನು ಖುಲಾಸೆ ಮಾಡಬೇಕು ಎಂದು ಕೋರಿದರು.

ಗೋಷ್ಠಿಯಲ್ಲಿ ಟ್ರಸ್ಟ್‌ನ ರಾಜ್ಯ ಉಪಾಧ್ಯಕ್ಷ ಕೃಷ್ಣೇಗೌಡ, ಚಂದ್ರಶೇಖರ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…

2 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಕಸ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…

2 hours ago

ಹಾರ್ಮುಜ್ ಹಾದಿಯಲ್ಲಿ ಬಟ್ಟಬಯಲಾದ ನೀತಿ ವೈಫಲ್ಯ

ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ…

2 hours ago

ಕಡಂಗಮರೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ

ಗ್ರಾಮದಲ್ಲಿ ಆತಂಕ ಸೃಷ್ಟಿಸಿದ ಆನೆಗಳ ಹಿಂಡು; ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ: ಸಮೀಪದ ಅರಣ್ಯ ಪ್ರದೇಶದಿಂದ…

2 hours ago

ಗುಂಡ್ಲುಪೇಟೆ: ಟಿಪ್ಪರ್‌ಗಳಿಗೆ ಬೀಳಬೇಕಿದೆ ಬ್ರೇಕ್

ಒಂದು ವರ್ಷದಲ್ಲಿ ಹತ್ತಕ್ಕೂ ಹೆಚ್ಚು ಅಪಘಾತ; ಗಣಿಗಾರಿಕೆ ಹಗಲು-ರಾತ್ರಿ ನಡೆಯುವುದರಿಂದ ಟಿಪ್ಪರ್‌ಗಳ ಸಂಚಾರ ಹೆಚ್ಚಳ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ…

2 hours ago