Mysore
18
broken clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಕೆಆರ್‌ಎಸ್‌ನಿಂದ ಒಂದು ಲಕ್ಷ ಕ್ಯೂಸೆಕ್ಸ್‌ ನೀರು ಬಿಡುಗಡೆ!

ಮಂಡ್ಯ: ಕೆಆರ್‌ಎಸ್‌ ಜಲಾಶಯದಿಂದ ಸುಮಾರು 1,00,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು ಎಂದು ಕಾವೇರಿ ನೀರಾವರಿ ನಿಗಮ ನಿಯಮಿತ ಕಾರ್ಯಪಾಲಕ ಅಭಿಯಂತರರು ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡು ಸುರಕ್ಷಿತ ಸ್ಥಾನಗಳಿಗೆ ತೆರಳಲು ಕಾವೇರಿ ನೀರವರಿ ನಿಗಮದ ಕಾರ್ಯಪಾಲಕ ಅಭಿಯಂತರರು ಮನವಿ ಮಾಡಿದ್ದಾರೆ.

 

Tags: