ಮಂಡ್ಯ

ಕೆಆರ್‌ಎಸ್‌ ಜಲಾಶಯ ಭರ್ತಿಗೆ ಕೇವಲ 1 ಅಡಿ ಮಾತ್ರ ಬಾಕಿ: ರೈತರ ಮೊಗದಲ್ಲಿ ಮಂದಹಾಸ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ.

ಜಲಾಶಯದ ಇಂದಿನ ಒಳಹರಿವು 73,811 ಕ್ಯೂಸೆಕ್ಸ್‌ಗಳಾಗಿದ್ದು, ಇಂದಿನ ಹೊರಹರಿವು 40,000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 123.25 ಅಡಿಗಳಾಗಿದೆ. 49.452 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿಂದು 38.932 ಟಿಎಂಸಿ ನೀರು ಸಂಗ್ರಹವಾಗಿದೆ.

ಕೆಆರ್‌ಎಸ್‌ ಜಲಾಶಯದಿಂದ ಭಾರೀ ಪ್ರಮಾಣದ ನೀರನ್ನು ಹೊರಬಿಡಲಾಗಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಸ್ಥಿತಿ ಎದುರಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇನ್ನು ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ನಿಷೇಧಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

2 mins ago

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

13 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

14 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

16 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

18 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

18 hours ago