Mysore
29
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಕೆಆರ್‌ಎಸ್‌ ಜಲಾಶಯದ ಭರ್ತಿಗೆ ಕೇವಲ 5 ಅಡಿ ಬಾಕಿ: ಹೊಸ ದಾಖಲೆ ಬರೆಯಲು ಸಿದ್ಧವಾದ ಡ್ಯಾಂ

kaveri-dam-water-flow

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ.

ಸದ್ಯ ಡ್ಯಾಂನಲ್ಲಿ 119.40 ಅಡಿ ನೀರಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲಿ ಇಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ.

ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳ

ಸಾಮಾನ್ಯವಾಗಿ ಜುಲೈ ಅಂತ್ಯ ಹಾಗೂ ಆಗಸ್ಟ್‌ನಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗುತ್ತಿತ್ತು. ಆದರೆ ಈ ಬಾರಿ ಮುಂಗಾರು ಮಳೆ ಅವಧಿಗಿಂತ ಮುಂಚೆಯೇ ಪ್ರವೇಶ ಮಾಡಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಜಲಾಶಯ 119.40 ಅಡಿ ಭರ್ತಿಯಾಗಿದೆ.

ಜಲಾಶಯದ ಇಂದಿನ ಒಳಹರಿವು 13,359 ಕ್ಯೂಸೆಕ್ಸ್‌ಗಳಾಗಿದೆ. 49.452 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿಂದು 42.291 ಟಿಎಂಸಿ ನೀರು ಸಂಗ್ರಹವಾಗಿದೆ.

Tags:
error: Content is protected !!