ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ.
ಸದ್ಯ ಡ್ಯಾಂನಲ್ಲಿ 119.40 ಅಡಿ ನೀರಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲಿ ಇಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳ
ಸಾಮಾನ್ಯವಾಗಿ ಜುಲೈ ಅಂತ್ಯ ಹಾಗೂ ಆಗಸ್ಟ್‌ನಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗುತ್ತಿತ್ತು. ಆದರೆ ಈ ಬಾರಿ ಮುಂಗಾರು ಮಳೆ ಅವಧಿಗಿಂತ ಮುಂಚೆಯೇ ಪ್ರವೇಶ ಮಾಡಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯ 119.40 ಅಡಿ ಭರ್ತಿಯಾಗಿದೆ.
ಜಲಾಶಯದ ಇಂದಿನ ಒಳಹರಿವು 13,359 ಕ್ಯೂಸೆಕ್ಸ್‌ಗಳಾಗಿದೆ. 49.452 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿಂದು 42.291 ಟಿಎಂಸಿ ನೀರು ಸಂಗ್ರಹವಾಗಿದೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…