ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಜೂನ್ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದಲ್ಲಿ ಜೂನ್ ತಿಂಗಳಿನಲ್ಲೇ 118.60 ಅಡಿ ನೀರು ಭರ್ತಿಯಾಗಿದೆ.
ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲಿ 118.60 ಅಡಿ ನೀರು ತುಂಬಿದೆ. ಸಾಮಾನ್ಯವಾಗಿ ಜುಲೈ ಅಂತ್ಯ ಅಥವಾ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗುತ್ತಿತ್ತು. ಆದರೆ ಈ ಬಾರಿ ಜೂನ್ ತಿಂಗಳಲ್ಲೇ 118.60 ಅಡಿ ನೀರು ಭರ್ತಿಯಾಗಿದೆ.
ಜಲಾಶಯದ ಇಂದಿನ ನೀರಿನ ಮಟ್ಟ 118.60 ಅಡಿಗಳಾಗಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದೆ. ಜಲಾಶಯದ ಇಂದಿನ ಒಳಹರಿವು 18,387 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 1000 ಕ್ಯೂಸೆಕ್ಸ್‌ಗಳಾಗಿದೆ.





