ಮಂಡ್ಯ

ಕೆಆರ್ ಎಸ್ ಜಲಾಶಯ ಭರ್ತಿಯಾಗಲು ಕೇವಲ ೮ ಅಡಿ ಮಾತ್ರ ಬಾಕಿ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭರ್ಜರಿ ಮಳೆ ಮುಂದುವರೆದಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌.ಎಸ್‌ ಜಲಾಶಯ ಭರ್ತಿಗೆ ಕೇವಲ ೮ ಅಡಿ ಮಾತ್ರ ಬಾಕಿ ಇದೆ.

ಕಳೆದ ಒಂದು ವಾರದಿಂದ ನಿರಂತರವಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಕೆಆರ್‌ ಎಸ್‌ ಅಣೆಕಟ್ಟೆಗೆ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ಇಂದು ಕೆ.ಆರ್‌ ಎಸ್‌ ಜಲಾಶಯಗೆ ೪೪೬೧೭ ಕ್ಯೂಸೆಕ್‌ ನೀರು ಬರುತ್ತಿದೆ. ೧೨೪.೮೦ ಅಡಿ ಗರಿಷ್ಠ ಮಟ್ಟ ಹೊಂದಿರುವ ಡ್ಯಾಂ ನಲ್ಲಿ ಸದ್ಯ ೧೧೬.೬೦ ಅಡಿ ಭರ್ತಿಯಾಗಿದೆ.

ಇನ್ನು ಜಲಾಶಯಲ್ಲಿ ೩೮೯೦೦ ಟಿಎಂಸಿ ನೀರು ಶೇಖರಣೆ ಆಗಿದ್ದು, ಇನ್ನೂ ೧೧ ಟಿಎಂಸಿ ನೀರು ಬಂದರೆ ೨೯.೪೫ ಟಿಎಂಸಿ ಶೇಖರಣೆ ಆಗಿ ಸಂಪೂರ್ಣ ಭರ್ತಿಯಾಗಲಿದೆ.  ಇಂದು ಜಲಾಶಯದಿಂದ ೨೫೬೬ ಕ್ಯೂಸೆಕ್‌ ನೀರು ನಾಲೆ ಹಾಗೂ ಕುಡಿಯಲು ಬಿಡಲಾಗುತ್ತಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರಕ್ಕೆ ಜೈಲು ಶಿಕ್ಷೆ ಸ್ವಾಗತಾರ್ಹ

ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ…

17 mins ago

ಓದುಗರ ಪತ್ರ: ಬಿಎಂಟಿಸಿ ಜನಹಿತ ಕಾಯಲಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್‌ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ…

38 mins ago

ಓದುಗರ ಪತ್ರ: ಸಾರ್ವಜನಿಕ ಗ್ರಂಥಾಲಯದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಗೆ ಪ್ರತಿನಿತ್ಯ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ…

41 mins ago

‘ಶಕ್ತಿ’ ಸ್ಕೀಮ್‌ನಿಂದ ಸಾರಿಗೆ ನಿಗಮಗಳಿಗೆ ನಿಶ್ಶಕ್ತಿ!

ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…

1 hour ago

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

6 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

6 hours ago