ಮಂಡ್ಯ

ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ದೀಪಾವಳಿ ಹಬ್ಬದ ಅಂಗವಾಗಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಜಿಲ್ಲೆಯಲ್ಲಿ ಅವಕಾಶ ನೀಡಲಾಗಿದೆ. ಹಸಿರು ಪಟಾಕಿ ಹೊರತು ಪಡಿಸಿ ಬೇರೆ ಪಟಾಕಿ ಮಾರಾಟ ಮಾಡಿದರೆ ಶಿಸ್ತುಬದ್ಧ ಕ್ರಮ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿ ಮಾರಾಟ ಮಾಡಲು ತಾತ್ಕಾಲಿಕ ಪರವಾನಿಗೆ ನೀಡುವ ಸಂಬಂಧ ಆಯೋಜಿಸಲಾಗಿದ್ದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಕ್ಟೋಬರ್ 18 ರಿಂದ 23 ರವರೆಗೆ ಮಾತ್ರ ಪಟಾಕಿ ಮಾರಾಟಗಾರರಿಗೆ ತಾತ್ಕಾಲಿಕ ಪರವಾನಗಿ ನೀಡಲಾಗುವುದು. ಜಿಲ್ಲಾಡಳಿತ ಹಾಗೂ ತಾಲ್ಲೂಕು‌ ಆಡಳಿತ ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ ಮಾಡಲಿದೆ. ನಿಗಧಿಪಡಿಸಿದ ಸ್ಥಳದಲ್ಲಿ ಮಾತ್ರ ಪಟಾಕಿ‌ ಅಂಗಡಿಗಳನ್ನು ತೆರೆಯಬೇಕು ಎಂದು ಹೇಳಿದರು.

ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗುವುದು, ತಹಶೀಲ್ದಾರ್ ನೇತೃತ್ವದ ಸಮಿತಿಯು ಆಯಾ ತಾಲೂಕು ಮಟ್ಟದಲ್ಲಿ ಪಟಾಕಿ ಮಾರಾಟಗಾರರಿಗೆ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಸಂದರ್ಭದಲ್ಲಿ ಸೂಕ್ತ ಜಾಗವನ್ನು ಗುರುತಿಸಿ ಅನುಮತಿ ನೀಡಬೇಕು, ಅನುಮತಿ ನೀಡುವ ಸಂದರ್ಭದಲ್ಲಿ ಗುರುತಿಸಲಾದ ಜಾಗದ ಸುತ್ತ ಮುತ್ತಲು ದೇವಸ್ಥಾನ, ಆಸ್ಪತ್ರೆ, ಮನೆಗಳು ಇಲ್ಲದಿರುವುದನ್ನು ಖಚಿತ ಪಡಿಸಿಕೊಳ್ಳಿ ಎಂದು ಎಚ್ಚರಿಸಿದರು.

ಪಟಾಕಿ ಮಾರಾಟ ಮಾಡಲು ತಾತ್ಕಾಲಿಕವಾಗಿ ಪರವಾನಿಗೆ ನೀಡುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ವೀಕೃತವಾಗುವ ಅರ್ಜಿಗಳನ್ನು ಆಯಾ ತಾಲೂಕು ಕಚೇರಿಗಳಿಗೆ ಕಳುಹಿಸಲಾಗುವುದು, ಪಟಾಕಿ ಮಾರಾಟ ಮಾಡಲು ನಿಗದಿಪಡಿಸುವ ಜಾಗವೂ ಸರ್ಕಾರಿ ಒಡೆತನಕ್ಕೆ ಸೇರಿದ್ದರೆ ಸಂಬಂಧ ಪಟ್ಟ ಇಲಾಖೆಯ ಬಳಿ ಎನ್‌ಓಸಿ ಪಡೆಯಬೇಕು. ಖಾಸಗಿ ಜಾಗ ಆಗಿದ್ದರೆ ಅ ಜಾಗದ ಮಾಲೀಕರ ಬಳಿ ಎನ್.ಓ.ಸಿ ಪಡೆಯಬೇಕು ಎಂದರು.

ಇದನ್ನು ಓದಿ :  ಕಾಂಗ್ರೆಸ್ ಕಾರ್ಯಕರ್ತರಿಗೆ ದಸರಾ-ದೀಪಾವಳಿ ಕೊಡುಗೆ : 38 ನಿಗಮ-ಮಂಡಳಿಗಳಿಗೆ ನೇಮಕ

ಪಟಾಕಿ ಮಳಿಗೆಗಳನ್ನು ತೆರೆಯಲು ಲೇಔಟ್ ಸಿದ್ಧಪಡಿಸಿ, ಒಂದು ಮಳಿಗೆಯಿಂದ ಇನ್ನೊಂದು ಮಳಿಗೆ 10×10 ಅಡಿ ದೂರ ಇರತಕ್ಕದ್ದು, ಪ್ರತಿ ಮಳಿಗೆ 9 ಲೀಟರ್ ಸಾಮರ್ಥ್ಯದ ವಾಟರ್ ಪ್ರೇಜರ್ ಮಾದರಿ ಅಗ್ನಿನಂದಕ ಹಾಗೂ ಎರಡು ಬಕೆಟ್ ಗಳಲ್ಲಿ ನೀರನ್ನು ಮತ್ತು ಮರಳನ್ನು ಇಟ್ಟಿರಬೇಕು. ಪ್ರತಿ ಮಳಿಗೆ ಪಕ್ಕದಲ್ಲಿ 2 ಡ್ರಂಗಳ ಕನಿಷ್ಠ 1000 ಲೀಟರ್ ನೀರನ್ನು ಕಡ್ಡಾಯವಾಗಿ ಶೇಖರಿಸಿಡಬೇಕು. ವಾಹನಗಳನ್ನು ಪಾರ್ಕಿಂಗ್ ಮಾಡಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.

ಮಳಿಗೆಗಳಿಂದ ಕನಿಷ್ಠ 50 ಮೀಟರ್ ದೂರದವರೆಗೂ ಧೂಮಪಾನ, ಕುಕ್ಕಿಂಗ್ (ಅಡುಗೆ) ವ್ಯವಸ್ಥೆ, ಕಿಡಿಹೊತ್ತಿಸುವುದು, ಪಟಾಕಿ ಸಿಡಿಸುವುದನ್ನು ನಿಷೇಧ ಎಂಬ ಸೂಚನಾ ಫಲಕ ಅಳವಡಿಸಬೇಕು, ಸದರಿ ಪ್ರದೇಶದಲ್ಲಿ ತಿಳಿಸಲಾದ ಯಾವುದೇ ವ್ಯಕ್ತಿ ನಿಯಮ ಉಲ್ಲಂಘಿಸಿದರೆ ನಿಯಮಾನುಸಾರ ಕ್ರಮ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾತನಾಡಿ, ತಾತ್ಕಾಲಿಕ ಪರವಾನಿಗೆ ಪಡೆದ ಪಟಾಕಿ ಮಾಲೀಕರು ನೇರವಾಗಿ ಗ್ರಾಹಕರಿಗೆ ಪಟಾಕಿಗಳನ್ನು ಮಾರಾಟ ಮಾಡಬೇಕು, ಯಾವುದೇ ಕಾರಣಕ್ಕೂ ಸಣ್ಣ ಪುಟ್ಟ ಅಂಗಡಿಗಳಿಗೆ ಪಟಾಕಿಗಳನ್ನು ರಫ್ತು ಮಾಡಬಾರದು, ಡಿ.ವೈ.ಎಸ್.ಪಿ ಗಳು ತಮ್ಮ ವ್ಯಾಪ್ತಿಗೆ ಬರುವ ಪಟಾಕಿ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪಟಾಕಿ ಮಾರಾಟಗಾರರು ಪಟಾಕಿಗಳನ್ನು ಅವರ ಮನೆಗಳಲ್ಲಿ ಶೇಖರಿಸಿರಕೂಡದು ಎಂದು ಹೇಳಿದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಶಿವಮೂರ್ತಿ, ಮಂಡ್ಯ ತಹಶೀಲ್ದಾರ್ ವಿಶ್ವನಾಥ್,ಪಾಂಡವಪುರ ತಹಶೀಲ್ದಾರ್ ಸಂತೋಷ್, ನಗರಾಭಿವೃದ್ಧಿ ಕೋಶಾಧಿಕಾರಿ ನರಸಿಂಹಮೂರ್ತಿ, ನಗರಸಭೆ ಪೌರಾಯುಕ್ತೆ ಪಂಪಶ್ರೀ, ಡಿ.ವೈ.ಎಸ್.ಪಿ ಲಕ್ಷ್ಮಿ ನಾರಾಯಣ್, ಜಿಲ್ಲಾ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಗೀತಾ, ಪಟಾಕಿ ಮಾರಾಟದಾರರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

8 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

9 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

11 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

14 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

15 hours ago