ಮಂಡ್ಯ: ಶಿವನಸಮುದ್ರದ ಬಳಿ ನಾಲೆಗೆ ಬಿದ್ದಿರುವ ಕಾಡಾನೆಯನ್ನು ಕ್ರೇನ್ ಮೂಲಕ ಮೇಲಕ್ಕೆತ್ತುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಎರಡು ಅರವಳಿಕೆ ಚುಚ್ಚು ಮದ್ದು ನೀಡಿದ ಬಳಿಕ ಆನೆ ಪ್ರಜ್ಞೆ ತಪ್ಪಿ ನಾಲೆಯ ಒಳಗೆ ಬಿದ್ದಿತು. ಬಳಿಕ ಕಾರ್ಯಾಚರಣೆ ಕೈಗೊಂಡ ಅರಣ್ಯ ಇಲಾಖೆ ಅಧಿಕಾರಿಗಳು ಕ್ರೇನ್ ಬಳಸಿ ಆನೆಯನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಡಾನೆಯನ್ನು ಮೇಲಕ್ಕೆತ್ತಲು 20ಕ್ಕೂ ಹೆಚ್ಚು ಸಿಬ್ಬಂದಿ ಹರಸಾಹಸ ಪಟ್ಟರು. ಕಡೆಗೆ ಕ್ರೇನ್ ಮೂಲಕ ಆನೆಯನ್ನು ಸುರಕ್ಷಿತವಾಗಿ ಮೇಲಕ್ಕೆತ್ತಲಾಯಿತು.





