ಮಂಡ್ಯ

ಸಾವಿನಲ್ಲೂ ಸಾರ್ಥಕತೆ; ತಂದೆಯ ಅಂಗಾಂಗ ದಾನ

ಕೆ.ಆರ್.ಪೇಟೆ :  ತಂದೆಯ  ಸಾವಿನ ಆಘಾತದಲ್ಲಿಯೂ  ಕುಟುಂಬದವರು ದಿಟ್ಟ ನಿರ್ಧಾರ ಕೈಗೊಂಡು ಅಂಗಾಂಗ ದಾನ ಮಾಡಲು ಒಪ್ಪಿಗೆ ನೀಡುವ ಮೂಲಕ ಮಾದರಿಯಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.

ಬೂಕನಕರೆ ಹೋಬಳಿಯ  ಗಂಜಿಗೆರೆ ಕೊಪ್ಪಲು ಗ್ರಾಮದ ಮೊಗಣ್ಣೇಗೌಡ (65) ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೆದುಳು ನಿಷ್ಕ್ರೀಯಗೊಂಡಿದ್ದನ್ನು ವೈದ್ಯರು ದೃಢಪಡಿಸಿದ್ದರು.  ಇನ್ನು ತಂದೆ ಜೀವಂತವಾಗಿ ಉಳಿಯುವುದಿಲ್ಲ ಎಂಬುದನ್ನು ಮನಗಂಡ ಪುತ್ರರು ಡಾ.ವಾಸನ್ ಅವರ ಸಲಹೆ ಮೇರೆಗೆ ತಮ್ಮ ತಂದೆಯ ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.

ಕುಟುಂಬಸ್ಥರು ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡುತ್ತಿದ್ದಂತೆೆ ಮೈಸೂರು ಜೆಎಸ್‌ಎಸ್ ಆಸ್ಪತ್ರೆಯ ವೈದ್ಯರಾದ ಡಾ.ವಾಸನ್ ಅವರು ಪರಿಶೀಲಿಸಿ ಮೊಗಣ್ಣೆಗೌಡ ದೇಹದಿಂದ ಲಿವರ್, ಎರಡು ಕಿಡ್ನಿ, ಹೃದುಂ, ಚರ್ಮ, ಕಣ್ಣುಗಳನ್ನು ತೆಗೆದು ಬೇರೆಯವರಿಗೆ ಹಾಕಬಹುದು ಎಂದು ತಿಳಿಸಿದ್ದಾರೆ.

ಮೃತ ಮೊಗಣ್ಣೇಗೌಡರ ಅಂತ್ಯಸಂಸ್ಕಾರವು ಸ್ವಗ್ರಾಮದಲ್ಲಿ ಅ.28 (ಇಂದು) ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

19 hours ago