ಮಂಡ್ಯ

ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಸರಿಪಡಿಸಲು ಸಂಘಟನೆಗಳ ಆಗ್ರಹ

ಮಂಡ್ಯ : ನಗರದ ಹೊರವಲಯದ ಅಮರಾವತಿ ಹೋಟೆಲ್‌ನಿಂದ ಜ್ಯೋತಿ ಇಂಟರ್ ನ್ಯಾಶನಲ್ ಹೋಟೆಲ್‌ವರೆಗೆ ನಡೆಯುತ್ತಿರುವ ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಕನ್ನಡಪರ ಸಂಘಟನೆಗಳು ಆಕ್ಷೇಪಿಸಿದ ಹಿನ್ನೆಲೆಯಲ್ಲಿ ರಾಷ್ಟೀಯ ಹೆದ್ದಾರಿ ಅಽಕಾರಿಯೊಂದಿಗೆ ಸಂಘಟನೆಗಳ ಮುಖಂಡರು ಶುಕ್ರವಾರ ಕಾಮಗಾರಿ ಪರಿವೀಕ್ಷಣೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ ಸಹಾಯಕ ಅಭಿಯಂತರ ಶಿವಕುಮಾರ್ ಅವರೊಂದಿಗೆ ಸಂಚರಿಸಿ ಕಾಮಗಾರಿಯಲ್ಲಿನ ಲೋಪಗಳನ್ನು ಅವರ ಗಮನಕ್ಕೆ ತರಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕರುನಾಡ ಸೇವಕರು ಸಂಘಟನೆಯ ರಾಜ್ಯ ವಕ್ತಾರ ಎಂ.ಬಿ.ನಾಗಣ್ಣಗೌಡ. ಡಿಸೆಂಬರ್ ೨೦೨೪ಕ್ಕೆ ಪೂರ್ಣಗೊಳ್ಳಬೇಕಾದ ಕಾಮಗಾರಿ ಡಿಸೆಂಬರ್ ೨೦೨೫ ಸಮೀಪಿಸಿದ್ದರೂ ಅಪೂರ್ಣವಾಗಿದೆ. ರಾಷ್ಟ್ರೀಯ ಹೆದ್ದಾರಿ ಮಧ್ಯ ಭಾಗದಿಂದ ಇಕ್ಕೆಲಗಳಲ್ಲಿ ೬೦ ಅಡಿ ಅಂತರದವರೆಗೆ ಯಾವುದೇ ಕಟ್ಟಡ ನಿರ್ಮಾಣಕ್ಕೆ ಅವಕಾಶವಿಲ್ಲ. ಆದರೆ ಮಂಡ್ಯ ನಗರದಲ್ಲಿ ಒತ್ತುವರಿ ತೆರವುಗೊಳಿಸದೆ ಮನಸೋಇಚ್ಚೆ ಪಾದಾಚಾರಿ ಮಾರ್ಗ ನಿರ್ಮಿಸಲಾಗುತ್ತಿದೆ ಎಂದು ದೂರಿದರು.

ನಂದಾ ವೃತ್ತದಿಂದ ಮಹಾವೀರ ವೃತ್ತದವರೆಗೆ ಪಾದಾಚಾರಿ ಮಾರ್ಗದ ಅಪೂರ್ಣ ಕಾಮಗಾರಿಯಿಂದ ಸಾರ್ವಜನಿಕರು ಅಪಘಾತಕೀಡಾಗಿ ಪೆಟ್ಟುಗಳಾಗಿವೆ. ಈ ಪ್ರದೇಶವು ಬ್ಯಾಂಕ್ ಸೇರಿದಂತೆ ಪ್ರಮುಖ ವಾಣಿಜ್ಯ ಕೇಂದ್ರವಾಗಿದ್ದು, ಸಾವಿರಾರು ವಿದ್ಯಾರ್ಥಿಗಳು ಈ ಮಾರ್ಗವನ್ನು ಬಳಸುತ್ತಾರೆ. ನಿಯಮಾನುಸಾರ ಪಾದಾಚಾರಿ ಮಾರ್ಗ ನಿರ್ಮಿಸದೆ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಮಹಾವೀರ ವೃತ್ತದಲ್ಲಿ ಮರಗಳನ್ನು ಕಡಿದು ರಸ್ತೆ ವಿಸ್ತರಿಸುವ ಬದಲು ಮರಗಳನ್ನು ಉಳಿಸಿಕೊಂಡು ರಸ್ತೆ ವಿಸ್ತರಿಸುವಂತೆ ಒತ್ತಾಯಿಸಿದರು.

ಇದನ್ನೂ ಓದಿ:-ಪೊಲೀಸ್ ಇಲಾಖೆ ಲಂಚ ಸಾಬೀತಾದರೆ ಸೇವೆಯಿಂದ ವಜಾ : ಗೃಹ ಸಚಿವ ಪರಮೇಶ್ವರ್‌

ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಎಚ್.ಡಿ. ಜಯರಾಂ, ಹೆದ್ದಾರಿಯ ಅತಿಕ್ರಮಣಕ್ಕೆ ಹೆದ್ದಾರಿ ಪ್ರಾಧಿಕಾರವೇ ಅವಕಾಶ ಕೊಟ್ಟಿದೆ. ನಗರದ ಆಯ್ದ ವೃತ್ತಗಳಲ್ಲಿ ಪ್ರಾಽಕಾರದಿಂದ ರಸ್ತೆ ಅತಿಕ್ರಮಿಸದಂತೆ ಎಚ್ಚರಿಕೆ ಫಲಕ ಅಳವಡಿಸಬೇಕು. ಶೀಘ್ರವಾಗಿ ಕಾಮಗಾರಿ ಮುಗಿಸದಿದ್ದಲ್ಲಿ ಹೆದ್ದಾರಿ ಕಚೇರಿ ಎದುರು ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ನಗರ ವ್ಯಾಪ್ತಿಯಲ್ಲಿ ಈ ಹಿಂದೆ ಹೆದ್ದಾರಿ ಅತಿಕ್ರಮಣವನ್ನು ನಗರಸಭೆ ತೆರವುಗೊಳಿಸಿತ್ತು. ಆದರೆ, ಮರಳಿ ಕೆಲವರು ಹೆದ್ದಾರಿ ಅತಿಕ್ರಮಿಸಿ ಕಟ್ಟಡಗಳನ್ನು ನಿರ್ಮಿಸಿ ಸಾರ್ವಜನಿಕರ ಮುಕ್ತ ಸಂಚಾರಕ್ಕೆ ಅಡ್ಡಿಯುಂಟು ಮಾಡುತ್ತಿದ್ದಾರೆ. ನಗರಸಭೆ ಮತ್ತು ಹೆದ್ದಾರಿ ಪ್ರಾಽಕಾರ ಜಂಟಿಯಾಗಿ ಹೆದ್ದಾರಿ ಅತಿಕ್ರಮಣದ ತೆರವಿಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಸಮೀಕ್ಷೇಯ ನಂತರ ಪಾದಾಚಾರಿ ಮಾರ್ಗದ ನಿರ್ಮಾಣದಲ್ಲಿ ಕೆಲವು ಲೋಪಗಳಾಗಿವೆ. ಇವೆಲ್ಲವನ್ನು ಸರಿಪಡಿಸಿ ಮುಂದಿನ ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಹಾಗೂ ಹೆದ್ದಾರಿ ಅತಿಕ್ರಮಣವನ್ನು ತೆರವುಗೊಳಿಸಲು ಅಗತ್ಯ ಕ್ರಮವಹಿಸುವುದಾಗಿ ಪ್ರಾಽಕಾರದ ಅಽಕಾರಿ ಶಿವಕುಮಾರ್ ಭರವಸೆ ನೀಡಿದರು.

ಈ ಸಂಧರ್ಭದಲ್ಲಿ ರಕ್ಷಣಾ ವೇದಿಕೆಯ ಆಟೋ ಘಟಕದ ವೆಂಕಟೇಶ್, ಮುದ್ದೇಗೌಡ, ಕುಮಾರ್ ಕನ್ನಡಿಗ, ಶಿವರಾಂ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

2 hours ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

2 hours ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

2 hours ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

2 hours ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

2 hours ago

ವೈಭವದ ಸುತ್ತೂರು ಜಾತ್ರಾ ಮಹೋತ್ಸವ ಸಂಪನ್ನ

ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…

2 hours ago