ಮಂಡ್ಯ : ನಗರದ ಹೊರವಲಯದ ಅಮರಾವತಿ ಹೋಟೆಲ್‌ನಿಂದ ಜ್ಯೋತಿ ಇಂಟರ್ ನ್ಯಾಶನಲ್ ಹೋಟೆಲ್‌ವರೆಗೆ ನಡೆಯುತ್ತಿರುವ ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಕನ್ನಡಪರ ಸಂಘಟನೆಗಳು ಆಕ್ಷೇಪಿಸಿದ ಹಿನ್ನೆಲೆಯಲ್ಲಿ ರಾಷ್ಟೀಯ ಹೆದ್ದಾರಿ ಅಽಕಾರಿಯೊಂದಿಗೆ ಸಂಘಟನೆಗಳ ಮುಖಂಡರು ಶುಕ್ರವಾರ ಕಾಮಗಾರಿ ಪರಿವೀಕ್ಷಣೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿ ಸಹಾಯಕ ಅಭಿಯಂತರ ಶಿವಕುಮಾರ್ ಅವರೊಂದಿಗೆ ಸಂಚರಿಸಿ ಕಾಮಗಾರಿಯಲ್ಲಿನ ಲೋಪಗಳನ್ನು ಅವರ ಗಮನಕ್ಕೆ ತರಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕರುನಾಡ ಸೇವಕರು ಸಂಘಟನೆಯ ರಾಜ್ಯ ವಕ್ತಾರ ಎಂ.ಬಿ.ನಾಗಣ್ಣಗೌಡ. ಡಿಸೆಂಬರ್ ೨೦೨೪ಕ್ಕೆ ಪೂರ್ಣಗೊಳ್ಳಬೇಕಾದ ಕಾಮಗಾರಿ ಡಿಸೆಂಬರ್ ೨೦೨೫ ಸಮೀಪಿಸಿದ್ದರೂ ಅಪೂರ್ಣವಾಗಿದೆ. ರಾಷ್ಟ್ರೀಯ ಹೆದ್ದಾರಿ ಮಧ್ಯ ಭಾಗದಿಂದ ಇಕ್ಕೆಲಗಳಲ್ಲಿ ೬೦ ಅಡಿ ಅಂತರದವರೆಗೆ ಯಾವುದೇ ಕಟ್ಟಡ ನಿರ್ಮಾಣಕ್ಕೆ ಅವಕಾಶವಿಲ್ಲ. ಆದರೆ ಮಂಡ್ಯ ನಗರದಲ್ಲಿ ಒತ್ತುವರಿ ತೆರವುಗೊಳಿಸದೆ ಮನಸೋಇಚ್ಚೆ ಪಾದಾಚಾರಿ ಮಾರ್ಗ ನಿರ್ಮಿಸಲಾಗುತ್ತಿದೆ ಎಂದು ದೂರಿದರು.
ನಂದಾ ವೃತ್ತದಿಂದ ಮಹಾವೀರ ವೃತ್ತದವರೆಗೆ ಪಾದಾಚಾರಿ ಮಾರ್ಗದ ಅಪೂರ್ಣ ಕಾಮಗಾರಿಯಿಂದ ಸಾರ್ವಜನಿಕರು ಅಪಘಾತಕೀಡಾಗಿ ಪೆಟ್ಟುಗಳಾಗಿವೆ. ಈ ಪ್ರದೇಶವು ಬ್ಯಾಂಕ್ ಸೇರಿದಂತೆ ಪ್ರಮುಖ ವಾಣಿಜ್ಯ ಕೇಂದ್ರವಾಗಿದ್ದು, ಸಾವಿರಾರು ವಿದ್ಯಾರ್ಥಿಗಳು ಈ ಮಾರ್ಗವನ್ನು ಬಳಸುತ್ತಾರೆ. ನಿಯಮಾನುಸಾರ ಪಾದಾಚಾರಿ ಮಾರ್ಗ ನಿರ್ಮಿಸದೆ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಮಹಾವೀರ ವೃತ್ತದಲ್ಲಿ ಮರಗಳನ್ನು ಕಡಿದು ರಸ್ತೆ ವಿಸ್ತರಿಸುವ ಬದಲು ಮರಗಳನ್ನು ಉಳಿಸಿಕೊಂಡು ರಸ್ತೆ ವಿಸ್ತರಿಸುವಂತೆ ಒತ್ತಾಯಿಸಿದರು.
ಇದನ್ನೂ ಓದಿ:-ಪೊಲೀಸ್ ಇಲಾಖೆ ಲಂಚ ಸಾಬೀತಾದರೆ ಸೇವೆಯಿಂದ ವಜಾ : ಗೃಹ ಸಚಿವ ಪರಮೇಶ್ವರ್
ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಎಚ್.ಡಿ. ಜಯರಾಂ, ಹೆದ್ದಾರಿಯ ಅತಿಕ್ರಮಣಕ್ಕೆ ಹೆದ್ದಾರಿ ಪ್ರಾಧಿಕಾರವೇ ಅವಕಾಶ ಕೊಟ್ಟಿದೆ. ನಗರದ ಆಯ್ದ ವೃತ್ತಗಳಲ್ಲಿ ಪ್ರಾಽಕಾರದಿಂದ ರಸ್ತೆ ಅತಿಕ್ರಮಿಸದಂತೆ ಎಚ್ಚರಿಕೆ ಫಲಕ ಅಳವಡಿಸಬೇಕು. ಶೀಘ್ರವಾಗಿ ಕಾಮಗಾರಿ ಮುಗಿಸದಿದ್ದಲ್ಲಿ ಹೆದ್ದಾರಿ ಕಚೇರಿ ಎದುರು ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ನಗರ ವ್ಯಾಪ್ತಿಯಲ್ಲಿ ಈ ಹಿಂದೆ ಹೆದ್ದಾರಿ ಅತಿಕ್ರಮಣವನ್ನು ನಗರಸಭೆ ತೆರವುಗೊಳಿಸಿತ್ತು. ಆದರೆ, ಮರಳಿ ಕೆಲವರು ಹೆದ್ದಾರಿ ಅತಿಕ್ರಮಿಸಿ ಕಟ್ಟಡಗಳನ್ನು ನಿರ್ಮಿಸಿ ಸಾರ್ವಜನಿಕರ ಮುಕ್ತ ಸಂಚಾರಕ್ಕೆ ಅಡ್ಡಿಯುಂಟು ಮಾಡುತ್ತಿದ್ದಾರೆ. ನಗರಸಭೆ ಮತ್ತು ಹೆದ್ದಾರಿ ಪ್ರಾಽಕಾರ ಜಂಟಿಯಾಗಿ ಹೆದ್ದಾರಿ ಅತಿಕ್ರಮಣದ ತೆರವಿಗೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಸಮೀಕ್ಷೇಯ ನಂತರ ಪಾದಾಚಾರಿ ಮಾರ್ಗದ ನಿರ್ಮಾಣದಲ್ಲಿ ಕೆಲವು ಲೋಪಗಳಾಗಿವೆ. ಇವೆಲ್ಲವನ್ನು ಸರಿಪಡಿಸಿ ಮುಂದಿನ ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಹಾಗೂ ಹೆದ್ದಾರಿ ಅತಿಕ್ರಮಣವನ್ನು ತೆರವುಗೊಳಿಸಲು ಅಗತ್ಯ ಕ್ರಮವಹಿಸುವುದಾಗಿ ಪ್ರಾಽಕಾರದ ಅಽಕಾರಿ ಶಿವಕುಮಾರ್ ಭರವಸೆ ನೀಡಿದರು.
ಈ ಸಂಧರ್ಭದಲ್ಲಿ ರಕ್ಷಣಾ ವೇದಿಕೆಯ ಆಟೋ ಘಟಕದ ವೆಂಕಟೇಶ್, ಮುದ್ದೇಗೌಡ, ಕುಮಾರ್ ಕನ್ನಡಿಗ, ಶಿವರಾಂ ಹಾಜರಿದ್ದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…