ಮಂಡ್ಯ

ಡೆಂಗ್ಯೂ ಜ್ವರದ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮ ಆಯೋಜಿಸಿ: ಡಾ ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ  ತಿಳಿಸಿದರು.

ಅವರು ಇಂದು(ಆ.5) ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಡೆಂಗ್ಯೂ ನಿಯಂತ್ರಣ ಕಾರ್ಯಕ್ರಮ ಕುರಿತು ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಜುಲೈ ಮಾಹೆಯಲ್ಲಿ ಒಟ್ಟು 395 ಪ್ರಕರಣಗಳು ದಾಖಲಾಗಿವೆ. ಮಂಡ್ಯ ನಗರ – 75, ಮಂಡ್ಯ ಗ್ರಾಮಾಂತರ – 147, ಮದ್ದೂರು – 61, ಮಳವಳ್ಳಿ – 24, ಪಾಂಡವಪುರ – 19, ಶ್ರೀರಂಗಪಟ್ಟಣ – 34, ಕೆ ಆರ್ ಪೇಟೆ – 14, ನಾಗಮಂಗಲ – 21 ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಾದ್ಯಂತ ಸಾರ್ವಜನಿಕರು ಡೆಂಗ್ಯೂ ಜ್ವರ ಬಾರದಂತೆ ಮುನ್ನೆಚ್ಚರಿಕ ಕ್ರಮಗಳನ್ನು ಅನುಸರಿಸಬೇಕು ಎಂದರು.

ಡೆಂಗೀ ಹಾಟ್ ಸ್ಪಾಟ್ ಗ್ರಾಮ  ಎಂದು ಗುರುತಿಸಿರುವ  ಪ್ರದೇಶದಲ್ಲಿ 100 ಮೀಟರ್ ಅಂತರದಲ್ಲಿ 2 ಡೆಂಗ್ಯೂ ಪ್ರಕರಣಗಳು ವರದಿಯಾದಲ್ಲಿ ಅಂತಹ ಗ್ರಾಮ/ ಪ್ರದೇಶವನ್ನು ಡೆಂಗೀ ಹಾಟ್ ಸ್ಪಾಟ್ ಎಂದು ಗುರುತಿಸಿ ಡೆಂಗ್ಯೂ ರೋಗ ನಿಯಂತ್ರಣವನ್ನು ಸಮರೋಪಾದಿಯಲ್ಲಿ ಮಾಡಲಾಗುತ್ತಿದೆ. ತ್ವರಿತ ಜ್ವರ ಸಮೀಕ್ಷೆ ಹಾಗೂ ಈಡಿಸ್ ಲಾರ್ವ ಸಮೀಕ್ಷೆ ಕಾರ್ಯವನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಮೋಹನ್ ಅವರು ತಿಳಿಸಿದರು.

ಫಿವರ್ ಕ್ಲಿನಿಕ್ ಹಾಟ್ ಸ್ಪಾಟ್ ಗ್ರಾಮಗಳಲ್ಲಿ ತಾತ್ಕಾಲಿಕ ಕ್ಲಿನಿಕ್ ತೆರೆದು ಡೆಂಗ್ಯೂ ಜ್ವರ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಡೆಂಗ್ಯೂ ಜ್ವರ ಪ್ರಕರಣಗಳಿಗೆ ರಕ್ತ ಲೇಪನ ಪರೀಕ್ಷೆ ಹಾಗೂ ಸಂಶಯಾಸ್ಪದ ಡೆಂಗೀ ಪ್ರಕರಣಗಳಿಂದ ರಕ್ತ ಮಾದರಿ ಸಂಗ್ರಹಿಸಿ ಜಿಲ್ಲಾ ಸರ್ವೆಲೆನ್ಸ್ ಲ್ಯಾಬ್ ನಲ್ಲಿ ಪರೀಕ್ಷೆಗೋಳಪಡಿಸಲಾಗುತ್ತಿದೆ. ಇದುವರೆಗೂ 6 ಫಿವರ್ ಕ್ಲಿನಿಕ್ ಕರ್ತವ್ಯ ನಿರ್ವಹಿಸುತ್ತಿದೆ ಎಂದರು.

ನೀಮ್ ಆಯಿಲ್ ವಿತರಣೆ ಹಾಟ್ ಸ್ಪಾಟ್ ವರದಿಯಾದ ಗ್ರಾಮಗಳಲ್ಲಿ ಬಿಪಿಎಲ್ ಕುಟುಂಬದವರಿಗೆ ಬೇವಿನ ಎಣ್ಣೆಯನ್ನು ವಿತರಿಸಲಾಗುತ್ತಿದೆ. ಜೊತೆಗೆ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಹಾಸ್ಟಲ್ ವಿದ್ಯಾರ್ಥಿಗಳಿಗೆ ಡೆಂಗ್ಯೂ ನಿಯಂತ್ರಣದ ಬಗ್ಗೆ ಆರೋಗ್ಯ ಶಿಕ್ಷಣ ನೀಡಿ ಅರಿವು ಮೂಡಿಸಿ ಬೇವಿನ ಎಣ್ಣೆಯನ್ನು ವಿತರಿಸಲಾಗುತ್ತಿದೆ. ಇದುವರೆಗೂ 50 ಎಂ ಎಲ್ ನ 4903 ಬಾಟಲಿಗಳನ್ನು ವಿತರಿಸಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ, ನಿವೃತ್ತ ಡಿ ಹೆಚ್ ಒ ಡಾ ಮರೀಗೌಡ, ಮಲೇರಿಯಾ ನಿಯಂತ್ರಣಾಧಿಕಾರಿ ಡಾ ಕಾಂತಾರಾಜು, ಶಿಕ್ಷಣಾಧಿಕಾರಿ ಚಂದ್ರಕಾಂತ, ಮಿಮ್ಸ್ ವೈದ್ಯರಾದ ಡಾ ಹರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆಕ್ರಮಣ ತಡೆಯಲು ಸಿದ್ದ : ಅಮೆರಿಕಗೆ ಕ್ಯೂಬಾ ಎಚ್ಚರಿಕೆ

ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…

6 mins ago

ಹನೂರು | ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿದ ಶಾಸಕ ಮಂಜುನಾಥ್‌

ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…

23 mins ago

ನ್ಯೂಯಾರ್ಕ್‌ | ಲ್ಯಾಂಡಿಂಗ್‌ ವೇಳೆ ಟ್ರಕ್‌ಗೆ ವಿಮಾನ ಡಿಕ್ಕಿ : ಇಬ್ಬರು ಸಾವು

ನ್ಯೂಯಾರ್ಕ್‌ : ಲ್ಯಾಂಡಿಂಗ್‌ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ…

27 mins ago

IPL | ಮೊದಲ ಪಂದ್ಯದಲ್ಲಿ ಆರ್‌ಸಿಬಿ-ಎಸ್‌ಆರ್‌ಎಚ್‌ ಮುಖಾಮುಖಿ

ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್‌ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…

45 mins ago

ಹೆಚ್ಚುವರಿಯಾಗಿ 1 ಸಾವಿರ ವಾಣಿಜ್ಯ ಸಿಲಿಂಡರ್‌ ಪೂರೈಕೆ; ನೋಂದಣಿ ಕಡ್ಡಾಯ : ಸಚಿವ ಮುನಿಯಪ್ಪ

ಬೆಂಗಳೂರು : ಹೆಚ್ಚುವರಿಯಾಗಿ ಒಂದು ಸಾವಿರ ವಾಣಿಜ್ಯ ಸಿಲಿಂಡರ್‌ ಪೂರೈಕೆ ಮಾಡುವುದಾಗಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಗ್ಯಾಸ್ ಕಂಪನಿಗಳು ಮತ್ತು…

48 mins ago

ಮಾಂದಲಪಟ್ಟಿಯಲ್ಲಿ ಮುಂದುವರಿದ ರಸ್ತೆ ದುರಸ್ತಿ ಕಾರ್ಯ

ಬೃಹತ್ ಯಂತ್ರ ಬಳಸದೆ ಕೆಲಸ; ಇನ್ನೂ 10-15 ದಿನ ಪ್ರವಾಸಿಗರ ಪ್ರವೇಶಕ್ಕಿಲ್ಲ ಅವಕಾಶ ನವೀನ್ ಡಿಸೋಜ ಮಡಿಕೇರಿ : ಕೊಡಗಿನ…

2 hours ago