ಮಂಡ್ಯ

ಜನರ ನೋವಿಗೆ ಸ್ಪಂದನೆಯೇ ನಮ್ಮ ಕರ್ತವ್ಯ : ಸಚಿವ ಚಲುವರಾಯಸ್ವಾಮಿ

ಮಂಡ್ಯ : ಸಾರ್ವಜನಿಕರ ನೋವಿಗೆ ಹಾಗೂ ಬೇಡಿಕೆಗೆ ಸ್ಪಂದಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಪ್ರಾಮಾಣಿಕವಾಗಿ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸ್ಪಂದಿಸುತ್ತೇವೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯ ಸ್ವಾಮಿ ಅವರು ತಿಳಿಸಿದರು.

ಅವರು ಇಂದು ನಗರದ ಗುರುಭವನದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಶಿಕ್ಷಕ ಪ್ರತಿನಿಧಿಗಳ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರವು ಯಾವುದೇ ನಿರ್ಣಯವನ್ನಾದರೂ ಕಾನೂನು ಇಲಾಖೆ ಹಾಗೂ ಸಂವಿಧಾನದ ವ್ಯಾಪ್ತಿಯಲ್ಲಿ ತೆಗೆದುಕೊಳ್ಳಬೇಕು. ಸಂವಿಧಾನ ಮೀರಿ ನಿರ್ಧಾರ ತೆಗೆದುಕೊಳ್ಳುವ ಹಕ್ಕು ಯಾರಿಗೂ ಇಲ್ಲ, ದಯಮಾಡಿ ಬೇಡಿಕೆಗಳ ಹಿಡೇರಿಕೆಗಾಗಿ ತಾಳ್ಮೆಯಿಂದ ವರ್ತಿಸಿ ಎಂದು ಮನವಿ ಮಾಡಿದರು.

ಕರ್ನಾಟಕ ರಾಜ್ಯದ ಏಳು ಕೋಟಿ ಕನ್ನಡಿಗರ ಸಮಸ್ಯೆಯನ್ನು ಹಾಲಿಸುವಲ್ಲಿ ರಾಜ್ಯ ಸರ್ಕಾರ ಎಂದಿಗೂ ಮುಂದೆಯಿರುತ್ತದೆ. ಹೋರಾಟ ಒಂದೇ ಪರಿಹಾರವಲ್ಲ , ಸರ್ಕಾರ ಏಳು ಕೋಟಿ ಕನ್ನಡಿಗರ ಪರವಾಗಿದೆ ಎಂದು ಶಿಕ್ಷಕರ ಸಮಸ್ಯೆ ಪರಿಹರಿಸುವಲ್ಲಿ ಭರವಸೆಯ ಮಾತುಗಳನ್ನ ಹೇಳಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಿ & ಆರ್ ತಿದ್ದುಪಡಿಯ ಬಗ್ಗೆ ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳು ನಿರ್ಣಯ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಮುಖ್ಯ ಮಂತ್ರಿಗಳು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಪೋಷಕರು ಖಾಸಗಿ ಶಾಲೆಗಳ ಮೊರೆ ಹೋಗದೆ ಸರ್ಕಾರಿ ಶಾಲೆಗಳಲ್ಲಿ ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ಒದಗಿಸುವ ಸಲುವಾಗಿ ಸರ್ಕಾರಿ ಶಾಲಾ ಶಿಕ್ಷಕರು ಜವಾಬ್ದಾರಿಯುತವಾಗಿ, ಆಕರ್ಷಕವಾಗಿ ಹಾಗೂ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿ ಎಂದು ಶಿಕ್ಷಕರಿಗೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ 2024 ಮತ್ತು 2025 ನೇ ಸಾಲಿನ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಗಳಿಸಿದ ವಿದ್ಯಾರ್ಥಿನಿಯರಾದ ಧೃತಿ, ಪುನೀತ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 90 ಕ್ಕೂ ಹೆಚ್ಚಿನ ಅಂಕ ಗಳಿಸಿ ನೀಟ್ ಪರೀಕ್ಷೆಯಲ್ಲಿ ಉತ್ತಿರ್ಣರಾದ ಚೇತನ್ ಅವರನ್ನು ಸನ್ಮಾನಿಸಲಾಯಿತು.

ನೂತನವಾಗಿ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ನುಗ್ಲಿ ಹಾಗೂ ಕಾರ್ಯದರ್ಶಿಗಳಾದ ಚೇತನ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಗೌಡ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಕರ್ನಾಟಕ ರಾಜ್ಯ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗೇಶ್ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿ ಹುಲಿ ದಾಳಿಗೆ ಹಸು ಬಲಿ; ಗ್ರಾಮಸ್ಥರಲ್ಲಿ ಆತಂಕ!

 ಕೊಡಗು: ಇಲ್ಲಿನ ನರಿಯಂದಡ ಗ್ರಾಮದಲ್ಲಿ ಹುಲಿ ದಾಳಿಗೆ ಹಸುವೊಂದು ಬಲಿಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಚೆಯ್ಯಂಡಾಣೆ ಸಮೀಪದ ಈ ಗ್ರಾಮದಲ್ಲಿ ಶನಿವಾರ…

18 hours ago

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: ತಮಿಳುನಾಡು ಕರಾವಳಿಗೆ ಮಳೆ ಮುನ್ಸೂಚನೆ!

ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ. ವಾಯುಭಾರ ಕುಸಿತ ತೀವ್ರಗೊಂಡಿದ್ದು, ಹವಾಮಾನ ವ್ಯವಸ್ಥೆ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ.…

19 hours ago

ಅನ್ನಭಾಗ್ಯ ಅಕ್ಕಿ ಅಕ್ರಮಕ್ಕೆ ಕಡಿವಾಣ: ₹8.80 ಕೋಟಿ ಅಕ್ಕಿ ಜಪ್ತಿ!

ಬೆಂಗಳೂರು: ಬಡವರ ಹೊಟ್ಟೆ ತುಂಬಿಸಬೇಕಾದ ಅನ್ನಭಾಗ್ಯ ಅಕ್ಕಿ ಕಾಳಸಂತೆಗೆ! ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಹಾರ ಇಲಾಖೆ ನಡೆಸಿದ ದಾಳಿಗಳಲ್ಲಿ ಒಂದೇ…

21 hours ago

ಓದುಗರ ಪತ್ರ: ನೆಹರೂ ಸೇವೆ ಸ್ಮರಿಸೋಣ

ರಾಜಕೀಯ ಮುತ್ಸದ್ದಿ, ದೇಶದ ಪ್ರಥಮ ಪ್ರಧಾನ ಮಂತ್ರಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರೂರವರ ಹುಟ್ಟುಹಬ್ಬವನ್ನು ಮಕ್ಕಳ ದಿನಾಚರಣೆಯ ಹೆಸರಿನಲ್ಲಿ ಶನಿವಾರ…

22 hours ago

ಓದುಗರ ಪತ್ರ: ಪ್ರತಿ ನಗರಕ್ಕೂ ಬೇಕಾಗಿದೆ ಕಸ ಸಂಸ್ಕರಣಾ ಘಟಕ

ಸ್ವಚ್ಛತಾ ಪಟ್ಟಿಯಲ್ಲಿ ರಾಜ್ಯದಲ್ಲಿ ಮೈಸೂರು ಮಕುಟ ಧರಿಸಿರುವುದು ಹೆಮ್ಮೆಯ ಸಂಗತಿಯಾದರೂ ಶೇ.೯೦ಕ್ಕೂ ಹೆಚ್ಚು ನಗರಗಳಲ್ಲಿ ಇಂದಿಗೂ ಕಸದ ನಿರ್ವಹಣೆ ಸಮರ್ಪಕವಾಗಿಲ್ಲದಿರುವುದು…

22 hours ago

ಓದುಗರ ಪತ್ರ: ಮೋದಿಯವರ ಹೃದಯ ವೈಶಾಲ್ಯತೆಯೂ ಹಾಸ್ಯಪ್ರಜ್ಞೆಯೂ

ಪ್ರಧಾನ ಮಂತ್ರಿ ಮೋದಿ ಅವರು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ರೈಲಿನ ಗುಲಾಬಿ ಮಾರ್ಗದ ಉದ್ಘಾಟನೆ ಹಾಗೂ ಮೈಸೂರಿನ ಚಾಮುಂಡಿ ಬೆಟ್ಟದ…

22 hours ago