ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ಈ ಕುರಿತು ಮಂಡ್ಯದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಮಾತನಾಡಿದ ಸಚಿವರು, ಈ ವರ್ಷ ಕೃಷಿ ಮೇಳ ಎಂದಿಗಿಂತ ವಿಭಿನ್ನವಾಗಿದೆ. ಕೃಷಿಕರು ಆಧುನಿಕ ಕೃಷಿಯ ಬಗ್ಗೆ ತಿಳಿದುಕೊಳ್ಳಬೇಕು. ಮಂಡ್ಯ ಕೃಷಿ ವಿಶ್ವವಿದ್ಯಾನಿಲಯ ದೊಡ್ಡ ಮಟ್ಟದಲ್ಲಿ ಬೆಳೆದು ಎಲ್ಲರಿಗೂ ಸಹಕಾರಿಯಾಗಲಿದೆ. ರೈತರಿಗೆ ಈ ವಿಶ್ವವಿದ್ಯಾನಿಲಯ ಹೊಸ ತಳಿಗಳನ್ನು ಪರಿಚಯಿಸುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇದನ್ನು ಓದಿ: ಮಂಡ್ಯದಲ್ಲಿ ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ಅವರಿಗೆ ರೈತರ ಬಗ್ಗೆ ಕಾಳಜಿ ಇದೆ. ಹಾಗಾಗಿ ರೈತರಿಗೋಸ್ಕರ ಈ ಕೆಲಸ ಮಾಡುತ್ತಿದ್ದಾರೆ. ಕೆಲವರು ಘೋಷಣೆಗಳಿಗಷ್ಟೇ ಸೀಮಿತವಾಗಿದ್ದಾರೆ. ಕೇಂದ್ರದಿಂದ ಬರ ಪರಿಹಾರ ಕೊಡಿಸುವಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಅತೀ ಮುಖ್ಯವಾಗಿದೆ. ಕರ್ನಾಟಕದಿಂದ ಆಯ್ಕೆ ಆಗಿರುವ ಸಂಸದರು ಏನೂ ಕೆಲಸ ಮಾಡುತ್ತಿಲ್ಲ. ಹಲವು ಬಾರಿ ಮನವಿ ಮಾಡಿದರೂ ಕೇಂದ್ರ ಸರ್ಕಾರ ಬರ ಪರಿಹಾರ ನೀಡಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.





