Mysore
24
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

ಕಾವೇರಿಗಾಗಿ ಮಂಡ್ಯದಲ್ಲಿ ಪಲ್ಟಿ ಚಳವಳಿ

ಮಂಡ್ಯ : ಕಾವೇರಿ ನೀರಿನ ವಿಚಾರದಲ್ಲಿ ಪದೇ ಪದೇ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ರಾಜ್ಯ ಸರ್ಕಾರದ ಧೋರಣೆಯಿಂದ ಹಾಗೂ ಕೋರ್ಟ್‌ನ ಆದೇಶದಿಂದ ರೈತರು ಪಲ್ಟಿ ಹೊಡೆಯುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಇಂದು ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಲ್ಟಿ ಚಳವಳಿ ನಡೆಸಿದರು.

ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು 53ನೇ ದಿನದ ಕಾವೇರಿ ಹೋರಾಟದ ಪ್ರಯುಕ್ತ ಪಲ್ಟಿ ಚಳವಳಿ ಮಾಡುವ ಮೂಲಕ ಸರ್ಕಾರವದ ಗಮನ ಸೆಳೆಯಲು ಬಿಜೆಪಿ ಕಾರ್ಯಕರ್ತರು ಮುಂದಾದರು. ಸದ್ಯ ಕೆಆರ್‌ಎಸ್ ಅಣೆಕಟ್ಟಿನಲ್ಲಿ 100 ಅಡಿಗಿಂತ ಕಡಿಮೆ ನೀರು ಇದೆ. ಹೀಗಿದ್ದರೂ ಸಹ ತಮಿಳುನಾಡಿಗೆ ನೀರು ಬಿಡಲು ಸರ್ಕಾರ ಸಮ್ಮತಿ ನೀಡುತ್ತಾ ಇದೆ. ಇತ್ತ ಕೋರ್ಟ್ ತಮಿಳುನಾಡಿಗೆ ನೀರು ಬಿಡಿ ಎಂದು ಮಂಡ್ಯ ರೈತರನ್ನು ಪಲ್ಟಿ ಹೊಡೆಸುತ್ತಿದೆ.

ಇದಕ್ಕೆ ವಿಡಂಬನೆ ಮಾಡಲು ಬಿಜೆಪಿ ಕಾರ್ಯಕರ್ತರು ಪಲ್ಟಿ ಹೊಡೆದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ನೀರು ನಿಲ್ಲಿಸಲು ಮನವಿ ಪತ್ರ ನೀಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!