ಮಂಡ್ಯ : ಕಾವೇರಿ ನೀರಿನ ವಿಚಾರದಲ್ಲಿ ಪದೇ ಪದೇ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ರಾಜ್ಯ ಸರ್ಕಾರದ ಧೋರಣೆಯಿಂದ ಹಾಗೂ ಕೋರ್ಟ್‌ನ ಆದೇಶದಿಂದ ರೈತರು ಪಲ್ಟಿ ಹೊಡೆಯುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಇಂದು ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಲ್ಟಿ ಚಳವಳಿ ನಡೆಸಿದರು.
ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು 53ನೇ ದಿನದ ಕಾವೇರಿ ಹೋರಾಟದ ಪ್ರಯುಕ್ತ ಪಲ್ಟಿ ಚಳವಳಿ ಮಾಡುವ ಮೂಲಕ ಸರ್ಕಾರವದ ಗಮನ ಸೆಳೆಯಲು ಬಿಜೆಪಿ ಕಾರ್ಯಕರ್ತರು ಮುಂದಾದರು. ಸದ್ಯ ಕೆಆರ್‌ಎಸ್ ಅಣೆಕಟ್ಟಿನಲ್ಲಿ 100 ಅಡಿಗಿಂತ ಕಡಿಮೆ ನೀರು ಇದೆ. ಹೀಗಿದ್ದರೂ ಸಹ ತಮಿಳುನಾಡಿಗೆ ನೀರು ಬಿಡಲು ಸರ್ಕಾರ ಸಮ್ಮತಿ ನೀಡುತ್ತಾ ಇದೆ. ಇತ್ತ ಕೋರ್ಟ್ ತಮಿಳುನಾಡಿಗೆ ನೀರು ಬಿಡಿ ಎಂದು ಮಂಡ್ಯ ರೈತರನ್ನು ಪಲ್ಟಿ ಹೊಡೆಸುತ್ತಿದೆ.
ಇದಕ್ಕೆ ವಿಡಂಬನೆ ಮಾಡಲು ಬಿಜೆಪಿ ಕಾರ್ಯಕರ್ತರು ಪಲ್ಟಿ ಹೊಡೆದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ನೀರು ನಿಲ್ಲಿಸಲು ಮನವಿ ಪತ್ರ ನೀಡಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…