ಚಿಕ್ಕಾಡೆ ಗ್ರಾಮದಲ್ಲಿ ಘಟನೆ; ಮೂವರ ಬಂಧನ
ಪಾಂಡವಪುರ : ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆಯುತ್ತಿದ್ದ ಕಲಹ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ತಾಲ್ಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಗ್ರಾಮದ ಕೃಷ್ಣೇಗೌಡ (೬೨) ಹತ್ಯೆಗೀಡಾದ ವ್ಯಕ್ತಿ. ಅದೇ ಗ್ರಾಮದ ರಾಜು ಅಲಿಯಾಸ್ ಅರುಣ, ಈತನ ತಮ್ಮ ಕಿರಣ ಹಾಗೂ ತಾಯಿ ಸುನೀತಾ ಕೊಲೆಗೈದಿರುವ ಆರೋಪಿಗಳು.
ಘಟನೆ ವಿವರ
ತಾಲ್ಲೂಕಿನ ಚಿಕ್ಕಾಡೆ ಗ್ರಾಮದ ಹೊರವಲಯದಲ್ಲಿ ಕೃಷ್ಣೇಗೌಡ ಹಾಗೂ ರಾಜು ಇಬ್ಬರಿಗೂ ಸೇರಿದ ಜಮೀನಿದ್ದು, ಜಮೀನು ಒತ್ತುವರಿ ವಿಚಾರವಾಗಿ ಇಬ್ಬರ ನಡುವೆ ಆಗಾಗ್ಗೆ ಜಗಳ ನಡೆದು ರಾಜಿ, ಸಂಧಾನ ಮಾಡಲಾಗಿತ್ತು ಎನ್ನಲಾಗಿದೆ. ಆದರೂ ಇದೇ ವಿಚಾರವಾಗಿ ಸೋಮವಾರ ಕೂಡ ಇಬ್ಬರ ನಡುವೆ ಕಲಹ ಏರ್ಪಟ್ಟಿದ್ದು, ಈ ವೇಳೆ ಆರೋಪಿಗಳು ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ತಲೆ ಮತ್ತು ಕಿವಿ ಭಾಗಕ್ಕೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಕೃಷ್ಣೇಗೌಡ ಸ್ಥಳದಲ್ಲೇ ಕುಸಿದು ಪ್ರಾಣ ಬಿಟ್ಟಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ಸಿ.ಈ. ತಿಮ್ಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಾಂಡವಪುರ ಪೊಲೀಸ್ ಇನ್ ಸ್ಪೆಕ್ಟರ್ ಶರತ್‌ಕುಮಾರ್ ಮಹಜರು ನಡೆಸಿದರು. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಮೃತರ ಪುತ್ರ ಶಶಿಕುಮಾರ್ ನೀಡಿದ ದೂರಿನ ಮೇರೆಗೆ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು : ವ್ಯಕ್ತಿ, ಕುಟುಂಬ, ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ರೂ.1 ಲಕ್ಷದವರೆಗೆ ದಂಡ, ಮೂರು ವರ್ಷದವರೆಗೆ ಜೈಲು ಶಿಕ್ಷೆ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಟ್ಟಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್…
ಬೆಂಗಳೂರು : ಎಸ್‍ಎಸ್‍ಎಲ್‍ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು,…
ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಸನಿಹದಲ್ಲಿರುವ ತೊಳಸಿಕೆರೆ ಗ್ರಾಮದ ದುಮ್ಮತಂಬಡಿ ಅವರಿಗೆ ಸೇರಿದ ಹಸು ಜಮೀನಿನಲ್ಲಿ ಮೇಯುತ್ತಿದ್ದಾಗ…
ನಂಜನಗೂಡು : ʻಹತ್ತೂರು ಜಾತ್ರೆಗೆ ಸುತ್ತೂರು ಜಾತ್ರೆʼ ಸಮ ಎಂಬ ಗಾದೆ ಹೊಂದಿರುವ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಾತ್ರಾ…
ಕಿಕ್ಕೇರಿ : ಗ್ರಾಮೀಣ ಬದುಕಿನ ಸವಾಲುಗಳ ನಡುವೆ ಬೆಳೆದ ರೈತನ ಮಗಳು ತನ್ನ ಅಕ್ಷರಾಸಕ್ತಿಯಿಂದ ಇಡೀ ತಾಲ್ಲೂಕಿನ ಹೆಮ್ಮೆಯ ಮಗಳಾಗಿ…