Mysore
24
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಅಧಿಕಾರ ದುರುಪಯೋಗ ಆರೋಪ: ಪಾಂಡವಪುರ ಎಸಿ ಅಮಾನತು

ಮಂಡ್ಯ: ಅಧಿಕಾರ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಪಾಂಡವಪುರ ಎಸಿ ಎಲ್.ಎಂ.ನಂದೀಶ್‌ ಅವರನ್ನು ಅಮಾನತು ಮಾಡಲಾಗಿದೆ.

ಅಧಿಕಾರ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇದರ ಮೇರೆಗೆ ಪಾಂಡವಪುರ ಉಪವಿಭಾಗಾಧಿಕಾರಿ ನಂದೀಶ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ.

ಫೆಬ್ರವರಿ.28ರಂದು ಮೈಸೂರು ಉಪವಿಭಾಗದ ಪ್ರಭಾರ ಉಪವಿಭಾಗಾಧಿಕಾರಿಯಾಗಿ ನಂದೀಶ್‌ ಅಧಿಕಾರ ವಹಿಸಿಕೊಂಡರು. ಆಗಗ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣಗಳ ಎದುರುದಾರರಿಗೆ ವಿಚಾರಣೆಗೆ ಅವಕಾಶ ಕಲ್ಪಿಸದೇ, ಅವರಿಂದ ದಾಖಲೆಗಳನ್ನು ಪಡೆದುಕೊಳ್ಳದೇ ವಿಚಾರಣೆಗೆ ತೆಗೆದುಕೊಂಡ ದಿನದಂದೇ ಆದೇಶ ಹೊರಡಿಸಿದ್ದರು.

ಇದರ ಜೊತೆಗೆ ಪಕ್ಷಕಾರರು ಅವರ ನಿಲುವುಗಳನ್ನು ಮಂಡಿಸಲು ಅವಕಾಶ ನೀಡದೇ ನೈಸರ್ಗಿಕ ನ್ಯಾಯದ ತತ್ವಗಳಿಗೆ ವಿರುದ್ಧವಾಗಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದ ಆರೋಪ ಹೊತ್ತಿದ್ದರು. ಈ ಆರೋಪಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.

ಗಂಭೀರ ಸ್ವರೂಪದ ಕರ್ತವ್ಯ ಲೋಪ ಎಸಗಿರುವ ಆರೋಪಗಳು ಕಂಡುಬಂದಿರುವುದರಿಂದ ಸರ್ಕಾರಿ ಸೇವೆಯಲ್ಲಿ ಮುಂದುವರಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದ್ದು, ಇವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

 

 

Tags: