ಮಂಡ್ಯ

ಅಧಿಕಾರ ದುರುಪಯೋಗ ಆರೋಪ: ಪಾಂಡವಪುರ ಎಸಿ ಅಮಾನತು

ಮಂಡ್ಯ: ಅಧಿಕಾರ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಪಾಂಡವಪುರ ಎಸಿ ಎಲ್.ಎಂ.ನಂದೀಶ್‌ ಅವರನ್ನು ಅಮಾನತು ಮಾಡಲಾಗಿದೆ.

ಅಧಿಕಾರ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇದರ ಮೇರೆಗೆ ಪಾಂಡವಪುರ ಉಪವಿಭಾಗಾಧಿಕಾರಿ ನಂದೀಶ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ.

ಫೆಬ್ರವರಿ.28ರಂದು ಮೈಸೂರು ಉಪವಿಭಾಗದ ಪ್ರಭಾರ ಉಪವಿಭಾಗಾಧಿಕಾರಿಯಾಗಿ ನಂದೀಶ್‌ ಅಧಿಕಾರ ವಹಿಸಿಕೊಂಡರು. ಆಗಗ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣಗಳ ಎದುರುದಾರರಿಗೆ ವಿಚಾರಣೆಗೆ ಅವಕಾಶ ಕಲ್ಪಿಸದೇ, ಅವರಿಂದ ದಾಖಲೆಗಳನ್ನು ಪಡೆದುಕೊಳ್ಳದೇ ವಿಚಾರಣೆಗೆ ತೆಗೆದುಕೊಂಡ ದಿನದಂದೇ ಆದೇಶ ಹೊರಡಿಸಿದ್ದರು.

ಇದರ ಜೊತೆಗೆ ಪಕ್ಷಕಾರರು ಅವರ ನಿಲುವುಗಳನ್ನು ಮಂಡಿಸಲು ಅವಕಾಶ ನೀಡದೇ ನೈಸರ್ಗಿಕ ನ್ಯಾಯದ ತತ್ವಗಳಿಗೆ ವಿರುದ್ಧವಾಗಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದ ಆರೋಪ ಹೊತ್ತಿದ್ದರು. ಈ ಆರೋಪಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.

ಗಂಭೀರ ಸ್ವರೂಪದ ಕರ್ತವ್ಯ ಲೋಪ ಎಸಗಿರುವ ಆರೋಪಗಳು ಕಂಡುಬಂದಿರುವುದರಿಂದ ಸರ್ಕಾರಿ ಸೇವೆಯಲ್ಲಿ ಮುಂದುವರಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದ್ದು, ಇವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಸ್ತೆ ದಾಟುವಾಗ ಕಾರು ಡಿಕ್ಕಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು

ಹಾಸನ: ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಆಗಷ್ಟೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರದ…

7 mins ago

ಡ್ರಗ್ಸ್‌ ಮುಕ್ತ ಕರ್ನಾಟಕ ಮಾಡಲು ಹೋರಾಟ: ಸಿಎಂ ಸಿದ್ದರಾಮಯ್ಯ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಮಾಡಲು ನಾವು ಹೋರಾಟ ನಡೆಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಡ್ರಗ್ಸ್ ಜಾಲ…

17 mins ago

ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯ ಫಲಿತಾಂಶಕ್ಕೂ ಸಿಎಂ ಕುರ್ಚಿ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ…

32 mins ago

ಮಹಿಳೆಯನ್ನು ದುರ್ಬಲ ಎಂದು ನೋಡುವ ಕಾಲ ಮುಗಿದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಪಿರಿಯಾಪಟ್ಟಣ: ಮಹಿಳೆಯರು ಇವತ್ತು ಕಟ್ಟುಪಾಡುಗಳನ್ನು ಒಡೆದು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

1 hour ago

ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿದೀಪ: ಎಂಎಲ್‌ಸಿ ಸಿ.ಎನ್.ಮಂಜೇಗೌಡ

ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.…

2 hours ago

ಒಂದೇ ವಾರದಲ್ಲಿ 1000 ಕೋಟಿ ಕ್ಲಬ್‌ ಸೇರಿದ ಧುರಂಧರ್-‌2

ಆದಿತ್ಯ ಧರ್‌ ನಿರ್ದೇಶನದ ರಣವೀರ್‌ ಸಿಂಗ್‌ ಅಭಿನಯದ ಧುರಂಧರ್‌ 2 ಸಿನಿಮಾ ಬಿಡುಗಡೆಯಾದ ಒಂದೇ ವಾರದಲ್ಲಿ 1000 ಕೋಟಿ ರೂ…

2 hours ago