ಮಂಡ್ಯ: ಅಧಿಕಾರ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಪಾಂಡವಪುರ ಎಸಿ ಎಲ್.ಎಂ.ನಂದೀಶ್ ಅವರನ್ನು ಅಮಾನತು ಮಾಡಲಾಗಿದೆ.
ಅಧಿಕಾರ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇದರ ಮೇರೆಗೆ ಪಾಂಡವಪುರ ಉಪವಿಭಾಗಾಧಿಕಾರಿ ನಂದೀಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ.
ಫೆಬ್ರವರಿ.28ರಂದು ಮೈಸೂರು ಉಪವಿಭಾಗದ ಪ್ರಭಾರ ಉಪವಿಭಾಗಾಧಿಕಾರಿಯಾಗಿ ನಂದೀಶ್ ಅಧಿಕಾರ ವಹಿಸಿಕೊಂಡರು. ಆಗಗ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣಗಳ ಎದುರುದಾರರಿಗೆ ವಿಚಾರಣೆಗೆ ಅವಕಾಶ ಕಲ್ಪಿಸದೇ, ಅವರಿಂದ ದಾಖಲೆಗಳನ್ನು ಪಡೆದುಕೊಳ್ಳದೇ ವಿಚಾರಣೆಗೆ ತೆಗೆದುಕೊಂಡ ದಿನದಂದೇ ಆದೇಶ ಹೊರಡಿಸಿದ್ದರು.
ಇದರ ಜೊತೆಗೆ ಪಕ್ಷಕಾರರು ಅವರ ನಿಲುವುಗಳನ್ನು ಮಂಡಿಸಲು ಅವಕಾಶ ನೀಡದೇ ನೈಸರ್ಗಿಕ ನ್ಯಾಯದ ತತ್ವಗಳಿಗೆ ವಿರುದ್ಧವಾಗಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದ ಆರೋಪ ಹೊತ್ತಿದ್ದರು. ಈ ಆರೋಪಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.
ಗಂಭೀರ ಸ್ವರೂಪದ ಕರ್ತವ್ಯ ಲೋಪ ಎಸಗಿರುವ ಆರೋಪಗಳು ಕಂಡುಬಂದಿರುವುದರಿಂದ ಸರ್ಕಾರಿ ಸೇವೆಯಲ್ಲಿ ಮುಂದುವರಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದ್ದು, ಇವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…