Mysore
28
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಪಾಂಡವಪುರ ಎಸಿ ವರ್ಗಾವಣೆಗೆ ಒತ್ತಡ: ಭಾರತೀಯ ಕಿಸಾನ್ ಸಂಘ

ಮಂಡ್ಯ: ಜನಪರವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪಾಂಡವಪುರ ಉಪ ವಿಭಾಗಾಧಿಕಾರಿ ಕೆ.ಆರ್. ಶ್ರೀನಿವಾಸ್ ಅವರ ವಿರುದ್ಧ ಕೆಲ ಪಟ್ಟಭದ್ರ ಹಿತಾಸಕ್ತಿಗಳು ರಾಜಕೀಯ ಪಿತೂರಿಯಿಂದ ವರ್ಗಾವಣೆಗೆ ಒತ್ತಡ ಹೇರುತ್ತಿವೆ. ಇದನ್ನು ನಿಲ್ಲಿಸಿ ಅವರನ್ನೆ ಮುಂದುವರಿಸಬೇಕೆಂದು ಭಾರತೀಯ ಕಿಸಾನ್ ಸಂಘದ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿ ಬಳಿ ಸಚಿವ ಚಲುವರಾಯಸ್ವಾಮಿ ಅವರನ್ನು ಭೇಟಿ ಮಾಡಿದ ಕಿಸಾನ್ ಸಂಘದ ಕಾರ್ಯಕರ್ತರು, ಶ್ರೀನಿವಾಸ್ ಅವರು ಒಳ್ಳೆಯ ಪ್ರಾಮಾಣಿಕ ಅಧಿಕಾರಿಯಾಗಿದ್ದು, ಈ ಅಧಿಕಾರಿಯವರ ಬಳಿ ಯಾರೇ ಸಾಮಾನ್ಯರು ಭೇಟಿ ಮಾಡಿದರೆ ಅವರ ಕೆಲಸಗಳನ್ನು ಮಾಡಿಕೊಟ್ಟು ಸಾರ್ವಜನಿಕರಿಗೆ ಅನುಕೂಲ ಮಾಡುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದರು.

ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ, ಕೆ.ಆರ್. ಪೇಟೆ ತಾಲೂಕಿನ ಕೆಲಸ ಕಾರ್ಯಗಳು ನ್ಯಾಯಸಮ್ಮತವಾಗಿ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ. ತಮ್ಮ ದುರುದ್ದೇಶಗಳಿಗೆ ಅನುಗುಣವಾಗಿ ನಡೆದುಕೊಳ್ಳುತ್ತಿಲ್ಲ ಎಂಬ ಕಾರಣಕ್ಕಾಗಿ ಪಟ್ಟಭದ್ರಾ ಹಿತಾಶಕ್ತಿಗಳು ಅವರನ್ನು ತೇಜೋವಧೆ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆ.ಆರ್. ಶ್ರೀನಿವಾಸ್ ಅವರನ್ನು ಅದೇ ಹುದ್ದೆಯಲ್ಲಿ ಮುಂದುವರಿಸುವ ಮೂಲಕ ಜನಪರವಾಗಿ ಕೆಲಸ ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.

ಸಂಘದ ದಕ್ಷಿಣ ಪ್ರಾಂತ ಅಧ್ಯಕ್ಷ ಹಾಡ್ಯ ರಮೇಶರಾಜು, ಮುಖಂಡರಾದ ಬಿ.ಪಿ. ಅಪ್ಪಾಜಿ, ಪುಟ್ಟಮ್ಮ, ಶಿವಣ್ಣ ನಾಗಮಂಗಲ, ಬೆಟ್ಟಪ್ಪ, ಅಚ್ಚುತ, ತಮ್ಮಣ್ಣ ಸೇರಿದಂತೆ ಹಲವರು ಇದ್ದರು.

Tags:
error: Content is protected !!