ಮಂಡ್ಯ

ಕನ್ನಡ ನಾಡು ನುಡಿ ಹಬ್ಬದಲ್ಲಿ ಭಾಗವಹಿಸಿ ಸಂಭ್ರಮಿಸಿ: ಡಾ: ಮಹೇಶ್ ಜೋಶಿ

ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡ ನಾಡು ನುಡಿಯ ಹಬ್ಬವಾಗಿದ್ದು, ನೊಂದಣಿ ಮಾಡಿಕೊಳ್ಳುವವರು ಡಿಸೆಂಬರ್ 20, 21 ಹಾಗೂ 22 ರಂದು 3 ದಿನ ಸಂಪೂರ್ಣವಾಗಿ ಭಾಗವಹಿಸಿ ಸಂಭ್ರಮಿಸಿ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ: ಮಹೇಶ್ ಜೋಶಿ ಹೇಳಿದರು.

ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ  ತಾಲ್ಲೂಕು ಮಟ್ಟದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ವಿವಿಧ ಪ್ರಚಾರ ಕಾರ್ಯಗಳನ್ನು ಕೈಗೊಂಡು ಸಾಹಿತ್ಯ‌ ಸಮ್ಮೇಳಕ್ಕೆ ಆಹ್ವಾನಿಸಿ ಪ್ರತಿಯೊಬ್ಬರ ಮನೆ ಹಾಗೂ ಮನವನ್ನು ತಲುಪಬೇಕು ಎಂದರು.

ಬಹಳಷ್ಟು ಜನರು ಸಾಹಿತ್ಯ ಸಮ್ನೇಳನದ ಉದ್ಘಾಟನೆಗೆ ಆಗಮಿಸಿ ನಂತರ ಜಿಲ್ಲೆಯ ಪ್ರವಾಸಿ ತಾಣಕ್ಕೆ ತೆರಳಿ‌ ಸಮಾರೋಪ ಸಮಾರಂಭಕ್ಕೆ ಬರುತ್ತಾರೆ ಹಾಜರಾತಿ ಪ್ರಮಾಣ ಪತ್ರ ಪಡೆಯುತ್ತಾರೆ. ಇದು ದುರದೃಷ್ಟಕರ ಸಂಗತಿ. ಕನ್ನಡದ ಹಬ್ಬದಲ್ಲಿ ಭಾಗವಹಿಸುವುದು ಹೆಮ್ಮೆಯ ವಿಷಯ ಎಂದು ಅತ್ಮವಲೋಕನ‌ ಮತ್ತು ಮನದಟ್ಟು ಮಾಡಿಕೊಳ್ಳಬೇಕು ಎಂದರು.

ಕಳೆದ ಬಾರಿ ನಡೆದ ಕನ್ನಡ ಸಾಹಿತ್ಯ ‌ಸಮ್ಮೇಳನದಲ್ಲಿ ಸುಮಾರು 6 ಕೋಟಿ ರೂ ಮೊತ್ತದ ಪುಸ್ತಕ ‌ಮಾರಾಟವಾಗಿತ್ತು. ಇನ್ನೂ‌ ಹೆಚ್ಚಿನ ಪುಸ್ತಕ ಮಾರಾಟ ತಾಂತ್ರಿಕ ತೊಂದರೆಯಿಂದ ಆಗಲಿಲ್ಲ. ಈ ಬಾರಿ ವಿಶೇಷ ನಿಗಾ ವಹಿಸಿ ಯಾವುದೇ ತಾಂತ್ರಿಕ‌ ತೊಂದರೆಯಾಗದಂತೆ ಕನ್ನಡ ಪುಸ್ತಕ ಮಾರಾಟ ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದರು.

ವಿವಿಧ ಇಲಾಖೆಗಳ ಮಾಹಿತಿ ಮಳಿಗೆಗಳ ಜೊತೆಯಲ್ಲಿ ವಾಣಿಜ್ಯ ಮಳಿಗೆಗಳನ್ನು ಸಹ ತೆರೆಯಲಾಗುವುದು‌. ವಾಣಿಜ್ಯ ಮಳಿಗೆಗಳಲ್ಲಿ ಯಾವುದೇ ಅಶ್ಲೀಲ ವಸ್ತು ಅಥವಾ ನಮ್ಮ ಸಂಸ್ಕೃತಿಗೆ ದಕ್ಕೆ ಬಾರದ ರೀತಿ ವ್ಯವಸ್ಥೆ ಮಾಡಲಾಗುವುದು ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಕಂಪನ್ನು ಎಲ್ಲ ಕಡೆ ಸಾರುವ ಪ್ರಯತ್ನ ಮಾಡುತ್ತಿದೆ. ಬೆಂಗಳೂರಿನಿಂದ ವಿವಿಧ ದೇಶಗಳಿಗೆ ತೆರಳುವ ವಿಮಾನಗಳಲ್ಲಿ ಕನ್ನಡ ಭಾಷೆಯಲ್ಲಿ ಸಂದೇಶಗಳನ್ನು ನೀಡುವಂತೆ ಮನವಿ ಮಾಡಲಾಗಿತ್ತು. ಎಮರೈಟ್ಸ್ ಹಾಗೂ ಬ್ರಿಟಿಷ್ ಎರ್ ಲೈನ್ ಗಳಲ್ಲಿ ಸಂದೇಶ ಹಾಗೂ ಮೆನು ವಿನಲ್ಲೂ ಕನ್ನಡ ಭಾಷೆ ಬಳಸುತ್ತಿರುವುದು ಸಂತೋಷದ ವಿಷಯವಾಗಿದೆ ಎಂದರು.

ಸಮ್ಮೇಳನದ ಯಶಸ್ಸಿಗೆ ಶ್ರಮಿಸಿ

ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 20,21 ಹಾಗೂ 22 ರಂದು ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಸರ್ಕಾರ, ಜಿಲ್ಲಾಡಳಿತ ಅಥವಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮವಲ್ಲ ಇದು ಪ್ರತಿಯೊಬ್ಬರ ಮನೆಯ ಕನ್ನಡದ ಹಬ್ಬ‌. ಇದರ ಯಶಸ್ಸಿಗೆ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ: ಕುಮಾರ  ತಿಳಿಸಿದರು.

ಸಮ್ಮೇಳನದ ಗೀತೆ ಬಿಡುಗಡೆ ಅಕ್ಟೋಬರ್ 23 ರಂದು ಸಾಹಿತ್ಯ ಸಮ್ಮೇಳನದ ಕಾರ್ಯಾಕಾರಿ ಸಮಿತಿ ಸಭೆ ನಡೆಯಲಿದ್ದು, ಅಂದು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲರನ್ನೂ ಆತ್ಮೀಯವಾಗಿ ಆಹ್ವಾನಿಸಲು ಗೀತೆ ಸಿದ್ಧಪಡಿಸುತ್ತಿದ್ದು, ಅಕ್ಟೋಬರ್ 23 ರಂದು ಬಿಡುಗಡೆ ಮಾಡಲಾಗಿದೆ. ನವೆಂಬರ್ 1 ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ 200 ರಿಂದ 300 ಮಕ್ಕಳು ನೃತ್ಯ ಪ್ರದರ್ಶನ ಮಾಡಲಿದ್ದಾರೆ ಎಂದರು.

ಪತ್ರ ಅಭಿಯಾನ ಹೊರ ರಾಜ್ಯ ಹಾಗೂ ದೇಶದಲ್ಲಿರುವ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳ ಕುಟುಂಬಸ್ಥರಿಗೆ ವಿದ್ಯಾರ್ಥಿಗಳಿಂದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವಂತೆ ಗೌರವಪೂರ್ವಕವಾಗಿ ಆಹ್ವಾನಿಸಿ ಶಿಕ್ಷಕರು ಪತ್ರ ಬರೆಯಿಸಿ ಎಂದರು.

ಟಿಕೇಟ್ ಗಳ ಮೇಲೆ ಆಹ್ವಾನ ಕೆ.ಎಸ್.ಆರ್.ಟಿ.ಸಿ ಟಿಕೇಟ್ ಗಳ ಮೇಲೆ, ನಂದಿನಿ ಹಾಲಿನ ಪ್ಯಾಕೇಟ್ ಗಳ ಮೇಲೆ, ವಿದ್ಯುತ್ ಬಿಲ್ ಗಳ ಮೇಲೆ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ-2024 ಮಂಡ್ಯ ಜಿಲ್ಲೆಯಲ್ಲಿ ನಡೆಯಲಿದೆ. ಬನ್ನಿ- ಭಾಗವಹಿಸಿ- ಯಶಸ್ವಿಗೊಳಿಸಿ ಎಂದು ಮುದ್ರಿಸಿ ಪ್ರಚಾರ ನೀಡುವಂತೆ ಪತ್ರ ಬರೆಯಲಾಗಿದೆ ಎಂದರು.

ಗ್ರಾಮ ಹಾಗೂ ಶಾಲಾ ಮಟ್ಟದಲ್ಲಿ ಪ್ರಚಾರ ಮಾಡಿ ಡಾ: ಹೆಚ್ ಎಲ್ ನಾಗರಾಜು
ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ಕೆಲಸಗಳು ಗ್ರಾಮ ಮಟ್ಟದಲ್ಲಿ ನಡೆಯಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಶಿಲ್ದಾರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ಒಟ್ಟುಗೂಡಿ ಗ್ರಾಮ ಮಟ್ಟದಲ್ಲಿ ಸಭೆ ನಡೆಸಿ ಹೆಚ್ಚು ಜನರು ಸಾಹಿತ್ಯ ಸಮ್ಮೇಳನ ಹಾಗೂ ಸಮ್ಮೇಳನದ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಸಂಘಟಿಸಿ ಎಂದು ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು ಹೇಳಿದರು.

ಸ್ಮರಣಾ ಸಂಚಿಕೆ ಶೀರ್ಷಿಕೆ ಸಲ್ಲಿಸಿ
ಸ್ಮರಣ ಸಂಚಿಕೆಗೆ ಶೀರ್ಷಿಕೆಯನ್ನು ಸಾರ್ವಜನಿಕರು ಲಿಖಿತ ರೂಪದಲ್ಲಿ ಪತ್ರದ ಮೂಲಕ ತಮ್ಮ ಹೆಸರು, ವಿಳಾಸದೊಂದಿಗೆ ಮುಚ್ಚಿದ ಲಕೋಟೆಯಲ್ಲಿ ಜಿಲ್ಲಾ ಗ್ರಂಥಾಲಯಕ್ಕೆ ತಲುಪಿಸಬೇಕು. ಆಯ್ದ ಅತ್ಯುತ್ತಮ ಶೀರ್ಷಿಕೆಗೆ ಗೌರವ ಪುರಸ್ಕಾರ ನೀಡಲಾಗುವುದು ಎಂದರು.

ಆಹಾರ ಇಲಾಖೆ ಉಪನಿರ್ದೇಶಕ ಕೃಷ್ಣಕುಮಾರ್, ತಹಶಿಲ್ದಾರ್ ಶಿವಕುಮಾರ್ ಬಿರಾದರ್ , ಕನ್ನಡ ಸಾಹಿತ್ಯ ಸಮ್ಮೇಳನದ ಸಮನ್ವಯ ಸಮಿತಿ ಸಂಚಾಲಕಿ ಡಾ: ಮೀರಾ ಶಿವಲಿಂಗಯ್ಯ, ಕನ್ನಡ ಸಾಹಿತ್ಯ ಪರಿಷತ್ತಿನ ಪಟೇಲ್ ಪಾಂಡು, ಚಂದ್ರಲಿಂಗು, ಅಪ್ಪಾಜಪ್ಪ, ಹುಸ್ಕೂರು ಕೃಷ್ಣೇಗೌಡ, ಪದ್ಮಿನಿ ನಾಗರಾಜು ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

7 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

8 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

8 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

9 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

14 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

14 hours ago