Mysore
26
haze

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಸಚಿವ ಚಲುವರಾಯಸ್ವಾಮಿ ವಿರುದ್ಧ ಪೇಸಿಎಸ್ ಅಭಿಯಾನ : ಪೋಸ್ಟರ್ ಅಂಟಿಸಿದ ಐವರು ಬಿಜೆಪಿ ಕಾರ್ಯಕರ್ತರ ಬಂಧನ

ಮಂಡ್ಯ : ಕೃಷಿ ಹಾಗೂ ಸಚಿವ ಎನ್. ಚೆಲುವರಾಯಸ್ವಾಮಿ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತರು ಮಂಡ್ಯ ನಗರದಲ್ಲಿ ‘ಪೇಸಿಎಸ್’ ಅಭಿಯಾನ’ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದರು.

ನಗರದ ಜಯಚಾಮರಾಜೇಂದ್ರ ವೃತ್ತದಲ್ಲಿ ಸಚಿವ ಚಲುವರಾಯಸ್ವಾಮಿ ಭಾವಚಿತ್ರ ಇದ್ದ ಫ್ಲೆಕ್ಸ್ ಗೆ `ಪೇಸಿಎಸ್’ ಅಭಿಯಾನದ ಪೋಸ್ಟರ್ ಅಂಟಿಸಿ ಸಚಿವರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಹೆದ್ದಾರಿಯ ಮಧ್ಯಭಾಗದ ಕಲ್ಲುಗಳಿಗೂ ಪೋಸ್ಟರ್ ಅಂಟಿಸಿದ ಬಿಜೆಪಿ ಪಕ್ಷದ ಐವರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಅಲ್ಲದೆ, ಪೇ ಸಿಎಸ್ ಪೋಸ್ಟರ್‌ಗಳನ್ನು ಕಿತ್ತು ಹಾಕಿದರು.

ಬಿಜೆಪಿ ಕಾರ್ಯಕರ್ತರಾದ ಸಿ.ಟಿ. ಮಂಜುನಾಥ್, ಶಿವಕುಮಾರ್ ಆರಾಧ್ಯ, ಪ್ರಸನ್ನ, ಶಿವಕುಮಾರ್, ವಿನೋಬಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೃಷಿ ಇಲಾಖೆಯ ಅಧಿಕಾರಿಗಳ ಹೆಸರಿನಲ್ಲಿ ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿತ್ತು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ರಾಜ್ಯಪಾಲರು ಪತ್ರವನ್ನು ಕಳುಹಿಸಿಕೊಟ್ಟಿದ್ದರು. ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ಪ್ರಕರಣ ಕುರಿತು ಸಿಐಡಿ ಪ್ರಕರಣ ಚುರುಕುಗೊಂಡಿರುವ ಬೆನ್ನೆಲ್ಲೇ ಬಿಜೆಪಿಯು ಸಚಿವರ ವಿರುದ್ಧ ಪೇ-ಸಿಎಸ್ ಅಭಿಯಾನ ಆರಂಭಿಸಿದೆ.

ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್ ಪೇ-ಸಿಎಂ ಅಭಿಯಾನ ಮಾಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರದ ಸಚಿವರ ವಿರುದ್ಧ ಇದೇ ಮಾದರಿಯ ಅಭಿಯಾನವನ್ನು ಬಿಜೆಪಿ ನಡೆಸಿದೆ.

ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧದ ಲಂಚ ಆರೋಪ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಬಿಜೆಪಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್‌ನವರು ಪೇಸಿಎಂ ಅಭಿಯಾನ ನಡೆಸಿ ಸರ್ಕಾರಕ್ಕೆ ಮುಜುಗರವನ್ನುಂಟು ಮಾಡಿದ್ದರು. ಆದರೆ, ಇದೀಗ ಕಾಂಗ್ರೆಸ್‌ನವರಿಗೇ ಪೆಟ್ಟು ಕೊಡಲು ಬಿಜೆಪಿಯವರು ಮುಂದಾಗಿದ್ದು, ಚಲುವರಾಯಸ್ವಾಮಿ ವಿರುದ್ಧ ಪೇಸಿಎಸ್ ಅಭಿಯಾನಕ್ಕೆ ಮುಂದಾಗಿದ್ದಾರೆ.

ಕೇವಲ ಪೋಸ್ಟರ್ ಅಂಟಿಸುವುದು ಮಾತ್ರವಲ್ಲ, ಸಾಮಾಜಿಕ ಜಾಲತಾಣಗಳಲ್ಲೂ ಕ್ಯೂಆರ್ ಕೋಡ್ ಬಳಸಿಕೊಂಡು ಕೃಷಿ ಅಧಿಕಾರಿಗಳಿಂದ ಲಂಚ ಪಡೆಯಲಾಗುತ್ತಿದೆ ಪೇಸಿಎಸ್ ಎಂದು ಹಾಕಲಾಗಿದೆ. ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ಪೇಸಿಎಸ್ ಭಾರೀ ಸದ್ದು ಮಾಡುತ್ತಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!