ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ ನೂಕಾಟ ತಳ್ಳಾಟ ಉಂಟಾಗಿದೆ. ಕೊನೆಗೆ ಏಜೆನ್ಸಿ ಮಾಲೀಕರು ಪೊಲೀಸ್ ಠಾಣೆಯ ಮುಂದೆ ಲಾರಿ ನಿಲ್ಲಿಸಿ ಪೊಲೀಸರ ರಕ್ಷಣೆಯಲ್ಲಿ ಸಿಲಿಂಡರ್ ವಿತರಣೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಪಟ್ಟಣದಲ್ಲಿ ಜರುಗಿದೆ.
ಕೆ.ಆರ್ ಪೇಟೆ ಪಟ್ಟಣದ ಮಂಜುನಾಥ್ ಏಜೆನ್ಸಿ ಎಂದಿನಂತೆ ಗ್ಯಾಸ್ ಸಿಲಿಂಡರ್ ವಿತರಣೆ ಮಾಡಲು ಗೊಡೋನ್ ಬಾಗಿಲು ತೆರದಿತ್ತು. ಇಂದು ಭಾನುವಾರದ ಕಾರಣ ಏಕಾಏಕಿ ನೂರಾರು ಜನರು ಸಿಲಿಂಡರ್ ತೆಗೆದುಕೊಳ್ಳಲು ಬಂದಿದ್ದಾರೆ. ಈ ವೇಳೆ ಸಿಲಿಂಡರ್ ಎಲ್ಲಿ ಖಾಲಿಯಾಗುತ್ತದೆ ಎಂದು ಬಂದ ನೂರಾರು ಜನರು ಗೊಡೋನ್‌ಗೆ ಮುಗಿಬಿದ್ದರು. ಈ ವೇಳೆ ಏಜೆನ್ಸಿಯವರು ಸಿಲಿಂಡರ್ ವಿತರಣೆ ಮಾಡಲು ಕಷ್ಟವಾಗಿದ್ದು, ಜನರಲ್ಲಿ ನೂಕು ನುಗ್ಗಲು ಉಂಟಾಗಿದೆ.
ಬಳಿಕ ಏಜೆನ್ಸಿ ಮಾಲೀಕರು ಕೆ.ಆರ್ ಪೇಟೆ ಪಟ್ಟಣ ಪೊಲೀಸ್ ಠಾಣೆ ಮುಂಭಾಗ ಸಿಲಿಂಡರ್ ಲಾರಿಯನ್ನ ನಿಲ್ಲಿಸಿಕೊಂಡು ಪೊಲೀಸರ ಸಮ್ಮುಖದಲ್ಲಿ ಗ್ರಾಹಕರಿಗೆ ಸಿಲಿಂಡರ್ ವಿತರಿಸಲಾಯಿತು.
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ…
ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ…
ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ…