ಮಂಡ್ಯ

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ ನೂಕಾಟ ತಳ್ಳಾಟ ಉಂಟಾಗಿದೆ. ಕೊನೆಗೆ ಏಜೆನ್ಸಿ ಮಾಲೀಕರು ಪೊಲೀಸ್ ಠಾಣೆಯ ಮುಂದೆ ಲಾರಿ ನಿಲ್ಲಿಸಿ ಪೊಲೀಸರ ರಕ್ಷಣೆಯಲ್ಲಿ ಸಿಲಿಂಡರ್ ವಿತರಣೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಪಟ್ಟಣದಲ್ಲಿ ಜರುಗಿದೆ.

ಕೆ.ಆರ್ ಪೇಟೆ ಪಟ್ಟಣದ ಮಂಜುನಾಥ್ ಏಜೆನ್ಸಿ ಎಂದಿನಂತೆ ಗ್ಯಾಸ್ ಸಿಲಿಂಡರ್ ವಿತರಣೆ ಮಾಡಲು ಗೊಡೋನ್ ಬಾಗಿಲು ತೆರದಿತ್ತು. ಇಂದು ಭಾನುವಾರದ ಕಾರಣ ಏಕಾಏಕಿ ನೂರಾರು ಜನರು ಸಿಲಿಂಡರ್ ತೆಗೆದುಕೊಳ್ಳಲು ಬಂದಿದ್ದಾರೆ. ಈ ವೇಳೆ ಸಿಲಿಂಡರ್ ಎಲ್ಲಿ ಖಾಲಿಯಾಗುತ್ತದೆ ಎಂದು ಬಂದ ನೂರಾರು ಜನರು ಗೊಡೋನ್‌ಗೆ ಮುಗಿಬಿದ್ದರು. ಈ ವೇಳೆ ಏಜೆನ್ಸಿಯವರು ಸಿಲಿಂಡರ್ ವಿತರಣೆ ಮಾಡಲು ಕಷ್ಟವಾಗಿದ್ದು, ಜನರಲ್ಲಿ ನೂಕು ನುಗ್ಗಲು ಉಂಟಾಗಿದೆ.

ಬಳಿಕ ಏಜೆನ್ಸಿ ಮಾಲೀಕರು ಕೆ.ಆರ್ ಪೇಟೆ ಪಟ್ಟಣ ಪೊಲೀಸ್ ಠಾಣೆ ಮುಂಭಾಗ ಸಿಲಿಂಡರ್ ಲಾರಿಯನ್ನ ನಿಲ್ಲಿಸಿಕೊಂಡು ಪೊಲೀಸರ ಸಮ್ಮುಖದಲ್ಲಿ ಗ್ರಾಹಕರಿಗೆ ಸಿಲಿಂಡರ್ ವಿತರಿಸಲಾಯಿತು.

ಆಂದೋಲನ ಡೆಸ್ಕ್

Recent Posts

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

4 mins ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

2 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

2 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

3 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

8 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

8 hours ago