ನಾಗಮಂಗಲ(ಮಂಡ್ಯ ಜಿಲ್ಲೆ): ತಾಲೂಕಿನ ಬೆಳ್ಳೂರಿನಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಭಾಗವಹಿಸಿದ್ದರು.

ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಬೆಳ್ಳೂರಿನ ಹೆಲಿಪ್ಯಾಡ್‌ಗೆ ಆಗಮಿಸಿದಾಗ ಜಿಲ್ಲಾಧಿಕಾರಿ ಡಾ.ಕುಮಾರ ಆತ್ಮೀಯವಾಗಿ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.

ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಆಗಮಿಸಿದರು. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಇದ್ದರು.

ಸಂವಾದ ಕಾರ್ಯಕ್ರವನ್ನು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಸಂವಾದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಭಾಷಣ ಮಾಡುತ್ತಿರುವ ಉಪ ರಾಷ್ಟ್ರಪತಿ ಜಗದೀಪ್ ಧನಕರ್.
ಸಂವಾದಲ್ಲಿ ಭಾಗವಹಿಸಿದ್ದ ವೈದ್ಯಕೀಯ ವಿದ್ಯಾರ್ಥಿಗಳು.

ಸವಾಂದಲ್ಲಿ ಭಾಗಿಯಾಗಿದ್ದ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರು ಆತ್ಮೀಯವಾಗಿ ಸ್ವಾಗತಿಸಿದ್ದು.



