ಮಳವಳ್ಳಿ : ಪ್ಲಾಸ್ಟಿಕ್ ಗೋದಾಮಿಗೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಹಳೆ ಪ್ಲಾಸ್ಟಿಕ್ ಭಸ್ಮವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ತಾಲೂಕಿನ ಕಿರುಗಾವಲು ಪೊಲೀಸ್ ಠಾಣೆ ವ್ಯಾಪ್ತಿಯ ಕೊದೆನು ಕೊಪ್ಪಲು ಗ್ರಾಮದ ಸಮೀಪವಿರುವ ರೈಸ್ ಮಿಲ್ ಪಕ್ಕದ ಎಂ.ಎಂ ಪ್ಲಾಸ್ಟಿಕ್ ಗೋದಾಮಿಗೆ ಆಕಸ್ಮಿಕ ಬೆಂಕಿ ಬಿದ್ದಿದೆ. ಪರಿಣಾಮ ಲಕ್ಷಾಂತರ ಮೌಲ್ಯದ ಹಳೆ ಪ್ಲಾಸ್ಟಿಕ್ ಚೀಲ ಹಾಗೂ ಪ್ಲಾಸ್ಟಿಕ್ ಐಟಂಗಳು ಸುಟ್ಟು ಭಸ್ಮವಾಗಿದೆ.
ದಾರಿಹೋಕರು ಬೆಂಕಿಯನ್ನು ಗಮನಿಸಿ ಅಗ್ನಿಶಾಮಕ ಠಾಣೆಗೆ ಕರೆ ಮಾಡಿದ್ದಾರೆ. ತಕ್ಷಣ ಅಗ್ನಿಶಾಮಕದಳದ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.




