ಮಂಡ್ಯ

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿ ಗಂಭೀರ ಆರೋಪ ಮಾಡಿದ್ದಾರೆ.

ದೆಹಲಿ ಮೂಲದ ಏಜೆನ್ಸಿಯೊಂದಕ್ಕೆ ಸುಪಾರಿ ನೀಡಿ, ರಾಜ್ಯದ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಸಂಬಂಧ ಸಿಸಿಟಿವಿ ದೃಶ್ಯಗಳು, ಆಡಿಯೋ ಮತ್ತು ವಿಡಿಯೋ ದಾಖಲೆಗಳಿರುವ ಪೆನ್‌ಡ್ರೈವ್ ಪ್ರದರ್ಶಿಸಿರುವ ಗಣಿಗ ರವಿ, ಒಂದು ವಾರದೊಳಗೆ ಸಾಕ್ಷ್ಯಗಳನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.

ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸುವುದಾಗಿಯೂ ಹೇಳಿದ್ದಾರೆ.

ಗಣಿಗ ರವಿ ಅವರ ಈ ಆರೋಪಗಳು ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿವೆ. ಆರೋಪಗಳಿಗೆ ಸಂಬಂಧಿಸಿದ ಸಾಕ್ಷ್ಯಗಳು ಬಿಡುಗಡೆಯಾದ ಬಳಿಕ ಪ್ರಕರಣ ಯಾವ ತಿರುವು ಪಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

ಆಂದೋಲನ ಡೆಸ್ಕ್

Recent Posts

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

5 mins ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

25 mins ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

2 hours ago

ಓದುಗರ ಪತ್ರ: ಫ್ಲೆಕ್ಸ್ ಮುಕ್ತವೆಂಬುದು ಸಾಂಪ್ರದಾಯಿಕ ಮಾತಾಗಬಾರದಲ್ಲವೇ?

ಮೈಸೂರು ನಗರವನ್ನು ಫ್ಲೆಕ್ಸ್ ಮುಕ್ತವಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೇ ಆಸಕ್ತಿ ವಹಿಸಿರುವುದು ಸ್ವಾಗತಾರ್ಹವಾಗಿದೆ. ದಸರಾ ಸಮಯದಲ್ಲಿ ಮೈಸೂರಿನಲ್ಲಿ ತಮ್ಮದೂ ಸೇರಿದಂತೆ ಯಾರ ಫ್ಲೆಕ್ಸ್ ಅಥವಾ…

2 hours ago

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

6 hours ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

6 hours ago