ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವೃತ್ತ ನಿರೀಕ್ಷಕರ ಕಚೇರಿಯನ್ನು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಂದು ಉದ್ಘಾಟನೆ ಮಾಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ದಿನಗಳ ಹಿಂದೆಯೇ ಉದ್ಘಾಟನೆಗೊಳ್ಳಬೇಕಾದ ಕೆರಗೋಡು ವೃತ್ತ ನಿರೀಕ್ಷಕರ ಕಚೇರಿಯು ಹಲವು ಕಾರಣಗಳಿಂದ ತಡವಾಗಿತ್ತು. ಸಾರ್ವಜನಿಕರ ಪೊಲೀಸ್ ಸೇವೆ ನಿರಂತರವಾಗಿ ದೊರೆಯಲು ತಡವಾಗುವುದನ್ನು ತಡೆಯಲು ಅಧಿಕೃತವಾಗಿ ಇಂದು ಉದ್ಘಾಟನೆಗೊಂಡಿದೆ ಎಂದು ತಿಳಿಸಿದರು. ಈ ವೇಳೆ ಮಂಡ್ಯ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್, ದಕ್ಷಿಣ ವಲಯ ಪೊಲೀಸ್ ಉಪ ಮಹಾನಿರೀಕ್ಷಕ ಡಾ.ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.





